ಭಾರತ – ಪಾಕಿಸ್ತಾನ ಗಡಿ ರಾಜ್ಯಗಳಲ್ಲಿ ಕಟ್ಟೆಚ್ಚರ; ಪೊಲೀಸರ ರಜೆ ರದ್ದು, ಶಾಲಾ ಕಾಲೇಜಿಗೆ ರಜೆ

ಜೈಪುರ:

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್‌ ಸಿಂದೂರ್‌  ಮೂಲಕ ಪಾಕಿಸ್ತಾನದ ಭಯೋತ್ಪಾದಕ ನೆಲೆಯನ್ನು ಧ್ವಂಸಮಾಡಿದೆ. ಭಾರತ ಹಾಗೂ ಪಾಕಿಸ್ತಾನ  ನಡುವೆ ಉದ್ವಿಗ್ವತೆ ಹೆಚ್ಚಾಗಿದೆ.ಗಡಿ ರಾಜ್ಯಗಳಾದ ರಾಜಸ್ಥಾನ ಮತ್ತು ಪಂಜಾಬ್ ಕಟ್ಟೆಚ್ಚರ ವಹಿಸಲಾಗಿದೆ. ಕಾಶ್ಮೀರದ ನಾಗರಿಕರ ಮೇಲೆ ಪಾಕಿಸ್ತಾನ ಶೆಲ್‌ ದಾಳಿಗಳನ್ನು ನಡೆಸಿದೆ. ಈ ವರೆಗೆ ದಾಳಿಯಲ್ಲಿ 30 ಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜಸ್ಥಾನದ ಜೈಸಲ್ಮೇರ್‌ ಗಡಿಯಲ್ಲಿ ಉದ್ಮಿಗ್ನತೆ ಹೆಚ್ಚಾಗಿದೆ. ರಾಜಸ್ಥಾನ ಸರ್ಕಾರ ಪೊಲೀಸ್‌ ಸಿಬ್ಬಂದಿಗಳ ರಜೆಯನ್ನು ರದ್ದುಗೊಳಿಸಿದೆ.

    ಪಾಕಿಸ್ತಾನದೊಂದಿಗೆ 1,037 ಕಿ.ಮೀ ಗಡಿಯನ್ನು ಹಂಚಿಕೊಂಡಿರುವ ರಾಜಸ್ಥಾನದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗಡಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ಗಡಿ ಭದ್ರತಾ ಪಡೆ ಸಿಬ್ಬಂದಿಗೆ ಗುಂಡು ಹಾರಿಸುವ ಆದೇಶ ನೀಡಲಾಗಿದೆ. ಭಾರತೀಯ ವಾಯುಪಡೆ ಕಟ್ಟೆಚ್ಚರ ವಹಿಸಿದೆ. ಪಶ್ಚಿಮ ವಲಯದಲ್ಲಿ ಯುದ್ಧ ವಿಮಾನಗಳು ಗಸ್ತು ತಿರುಗುತ್ತಿರುವುದರಿಂದ ಜೋಧ್‌ಪುರ, ಕಿಶನ್‌ಗಢ ಮತ್ತು ಬಿಕಾನೇರ್ ವಿಮಾನ ನಿಲ್ದಾಣಗಳಿಂದ ವಿಮಾನಗಳ ಹಾರಾಟವನ್ನು ಮೇ 9 ರವರೆಗೆ ಸ್ಥಗಿತಗೊಳಿಸಲಾಗಿದೆ. ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳು ಸಕ್ರಿಯಗೊಂಡಿವೆ ಎಂದು ತಿಳಿದುಬಂದಿದೆ.

    ಸುಖೋಯ್-30 ಎಂಕೆಐ ಜೆಟ್‌ಗಳು ಗಂಗಾನಗರದಿಂದ ರಣ್ ಆಫ್ ಕಚ್ ವರೆಗೆ ವಾಯು ಗಸ್ತು ನಡೆಸುತ್ತಿವೆ. ಬಿಕಾನೇರ್, ಶ್ರೀ ಗಂಗಾನಗರ, ಜೈಸಲ್ಮೇರ್ ಮತ್ತು ಬಾರ್ಮರ್‌, ಜೋಧಪುರ ಸೇರಿದಂತೆ ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ನೀಡಾಲಾಗಿದ್ದು, ಮುಂದಿನ ಆದೇಶದವರೆಗೆ ತೆರೆಯದಂತೆ ಆದೇಶ ಹೊರಡಿಸಲಾಗಿದೆ. ನಡೆಯುತ್ತಿರುವ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪೊಲೀಸರು ಮತ್ತು ರೈಲ್ವೆ ಸಿಬ್ಬಂದಿಯ ರಜೆಗಳನ್ನು ರದ್ದುಗೊಳಿಸಲಾಗಿದೆ.

   ಗಡಿ ಗ್ರಾಮಗಳು ಕಟ್ಟೆಚ್ಚರದಲ್ಲಿವೆ ಮತ್ತು ತುರ್ತು ಪ್ರತಿಕ್ರಿಯೆಗಾಗಿ ಸ್ಥಳಾಂತರಿಸುವ ಯೋಜನೆಗಳು ಜಾರಿಯಲ್ಲಿವೆ. ಗಡಿಯ ಸಮೀಪವಿರುವ ಡ್ರೋನ್ ವಿರೋಧಿ ವ್ಯವಸ್ಥೆಗಳನ್ನು ಸಹ ಸಕ್ರಿಯಗೊಳಿಸಲಾಗಿದೆ. ಜೈಸಲ್ಮೇರ್ ಮತ್ತು ಜೋಧ್‌ಪುರಕ್ಕೆ, ಮಧ್ಯರಾತ್ರಿಯಿಂದ ಬೆಳಿಗ್ಗೆ 4 ಗಂಟೆಯವರೆಗೆ ಬ್ಲ್ಯಾಕೌಟ್‌ಗೆ ಆದೇಶಗಳನ್ನು ನೀಡಲಾಗಿದೆ. ಪಂಜಾಬ್‌ನಲ್ಲಿ, ಎಲ್ಲಾ ಪೊಲೀಸ್ ಸಿಬ್ಬಂದಿಯ ರಜೆಗಳನ್ನು ರದ್ದುಪಡಿಸಲಾಗಿದೆ ಮತ್ತು ಸಾರ್ವಜನಿಕ ಸಭೆಗಳನ್ನು ನಿರ್ಬಂಧಿಸಲಾಗಿದೆ. ಗಡಿಯಲ್ಲಿನ ಉದ್ವಿಗ್ನತೆಯಿಂದಾಗಿ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

Recent Articles

spot_img

Related Stories

Share via
Copy link