ಬೆಂಗಳೂರು :
ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹಿಜಾಬ್ ನಿಷೇಧಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್, ಹಿಜಾಬ್ ಧರಿಸಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ ಈ ಬಗ್ಗೆ ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಲಿದೆ ಎಂದು ತಿಳಿಸಿದ್ದಾರೆ.
ಸ್ವಾತಂತ್ರ್ಯ ಸಿಕ್ಕಿ 75 ವರ್ಷದ ಬಳಿಕ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಪಡೆದ ಹಳ್ಳಿ!
ಎಸ್ ಎಸ್‌ಎಲ್ ಸಿ ಪರೀಕ್ಷೆಯಂತೆ ದ್ವಿತೀಯ ಪಿಯುಸಿ ಪರೀಕ್ಷೆಗೂ ಹಿಜಾಬ್ ನಿಷೇಧ ಮಾಡಲಾಗುವುದು. ಏಪ್ರಿಲ್ 22 ರಿಂದ ಮೇ. 18 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಎಸ್‌ಎಸ್ ಎಲ್ ಸಿ ಮಾದರಿಯಲ್ಲೇ ನಡೆಸಲಾಗುವುದು.
ರಾಜ್ಯದ ಶೇ. 90 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇದೆ. ಶೇ. 10 ರಷ್ಟು ಕಾಲೇಜುಗಳಲ್ಲಿ ಸಮವಸ್ತ್ರ ಇಲ್ಲ. ದ್ವಿತೀಯ ಪಿಯುಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮ ಸೂಚನೆ ವಸ್ತ್ರ ಧರಿಸಿ ಬರುವಂತಿಲ್ಲ. ಮುಖ್ಯ ಪರೀಕ್ಷೆಗೆ ಗೈರು ಹಾಜರಾದವರಿಗೆ ಮತ್ತೆ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ‘RRR’ ನಾಗಾಲೋಟ: 1 ಸಾವಿರ ಕೋಟಿ ರೂ. ಗಳಿಕೆಯತ್ತ ದಾಪುಗಾಲು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ