ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ : ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ಆರಂಭ

ಬೆಂಗಳೂರು :

 ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದದ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ  ಆರಂಭವಾಗಿದೆ.

          ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ಗದ್ದಲ ಜೋರಾಗಿದೆ. ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷದ ಬಗ್ಗೆ ಚರ್ಚೆ ನಡೆಯಲಿದ್ದು, ವಿವಿಧ ಜಿಲ್ಲೆಗಳ ಪರಿಸ್ಥಿತಿ ಕುರಿತಾಗಿ ಸಚಿವರೊಂದಿಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ವಿವಿಧ ಜಿಲ್ಲೆಗಳ ಮಾಹಿತಿಯನ್ನು ಸಂಗ್ರಹಿಸಿದ್ದು, ಇಂದು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚೆ ನಡೆಸಿದ್ದು, ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹೈಕೋರ್ಟ್‌ನಲ್ಲಿ ಹಿಜಾಬ್ ವಿವಾದ ಸಂಬಂಧ ಇಂದು ಮತ್ತೆ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಕೋರ್ಟ್ ತೀರ್ಪಿನತ್ತ ನೆಟ್ಟಿದೆ. ಸಂಪುಟ ಸಭೆಯಲ್ಲಿಯೂ ಈ ಸಂಬಂಧ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

         ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link