ಸಭೆಯಲ್ಲಿ ಹಿಜಾಬ್ ವಿವಾದ ಬಗ್ಗೆ ಚರ್ಚೆ ನಡೆಸಲಾಗುವುದು. ಸದ್ಯ ವಿದ್ಯಾರ್ಥಿಗಳ ಹೋರಾಟವನ್ನು ತಣ್ಣಗಾಗಿಸಲು ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶಾಲೆ- ಕಾಲೇಜುಗಳಿಗೆ ಗಜೆ ಘೋಷಿಸಿದೆ.
ರಾಜ್ಯದೆಲ್ಲೆಡೆ ಹಿಜಾಬ್-ಕೇಸರಿ ಶಾಲು ಸಂಘರ್ಷ ಹೆಚ್ಚಾಗುತ್ತಿದೆ.
ನಿನ್ನೆ (ಫೆ.08) ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹೋರಾಟ ಮಾಡಿದ್ದರು. ಧರಣಿಯಲ್ಲಿ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಹಲವರಿಗೆ ಗಾಯಗಳಾಗಿವೆ. ಪರ-ವಿರೋಧ ಹೆಸರಲ್ಲಿ ಬೀದಿಗಿಳಿದ ವಿದ್ಯಾರ್ಥಿಗಳು ದಾಂಧಲೆ ನಡೆಸಿದ್ದರು. ಶಿವಮೊಗ್ಗ, ದಾವಣಗೆರೆ, ಬನಹಟ್ಟಿ ಸಂಪೂರ್ಣ ರಣಾಂಗಣವಾಗಿತ್ತು.
ನಿನ್ನೆ ಕರ್ನಾಟಕ ಹೈಕೋರ್ಟ್ ಹಿಜಾಬ್ ವಿವಾದದ ಬಗ್ಗೆ ವಿಚಾರಣೆ ನಡೆಸಿದೆ. ಇಂದು ಇತ್ಯರ್ಥವಾಗುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಹಿಜಾಬ್ ವಿವಾದ ಬಗ್ಗೆ ಚರ್ಚೆ ನಡೆಸಲಾಗುವುದು. ಸದ್ಯ ವಿದ್ಯಾರ್ಥಿಗಳ ಹೋರಾಟವನ್ನು ತಣ್ಣಗಾಗಿಸಲು ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








