ಅಸ್ಸಾಂ:
ಗಡಿಯೊಳಗೆ ನುಸುಳಿ, ದೇಶದ ವಿವಿಧೆಡೆ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆಗಳ ಸಂಖ್ಯೆ ಹೆಚ್ಚಾಗುತ್ತಿದೆ.ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಸ್ಸಾಂ ಸರ್ಕಾರ ಪ್ರಯತ್ನಿಸುತ್ತಿದ್ದು, ಕರೀಮ್‌ಗಂಜ್ ಜಿಲ್ಲೆಯಲ್ಲಿ ಒಬ್ಬ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿ ವಾಪಸ್ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಬಿಸ್ವಾ ಶರ್ಮಾ, ಬಾಂಗ್ಲಾದೇಶದ ನುಸುಳುಕೋರ, ಮೊಹಿಬುಲ್ಲಾನನ್ನು ಅಂತಾರಾಷ್ಟ್ರೀಯ ಗಡಿ ಬಳಿ ಬಂಧಿಸಿ ವಾಪಸ್ ಕಳುಹಿಸಲಾಯಿತು ಎಂದು ತಿಳಿಸಿದ್ದಾರೆ.
ಅಸ್ಸಾಂನ ಕರೀಮ್ ಗಂಜ್, ಕ್ಯಾಚಾರ್, ಧುಬ್ರಿ ಮತ್ತು ದಕ್ಷಿಣ ಸಲ್ಮಾರಾ-ಮಂಕಚಾರ್ ಜಿಲ್ಲೆಗಳು ಬಾಂಗ್ಲಾದೇಶದೊಂದಿಗೆ 267.5 ಕಿಮೀ ಅಂತರದ ಅಂತಾರಾಷ್ಟ್ರೀಯ ಗಡಿಯನ್ನು ಹಂಚಿಕೊಂಡಿವೆ. ಅಸ್ಸಾಂ ಪೊಲೀಸರು ಮತ್ತು ಗಡಿ ಭದ್ರತಾ ಪಡೆ ಯೋಧರು ಗಡಿಯುದ್ದಕ್ಕೂ ಎಲ್ಲಾ ಒಳನುಸುಳುವಿಕೆ ಪ್ರಯತ್ನಗಳನ್ನು ವಿಫಲಗೊಳಿಸಿವೆ. ತಂಡಗಳು ಉತ್ತಮ ಕೆಲಸ ಮಾಡಿವೆ ಎಂದು ಹೇಳಿದ್ದಾರೆ.
ಭಾರತೀಯರಲ್ಲದವರು ಬಾಂಗ್ಲಾದೇಶದಿಂದ ದೇಶಕ್ಕೆ ಪ್ರವೇಶಿಸುವ ಯಾವುದೇ ಪ್ರಯತ್ನವನ್ನು ಕಾನೂನಿನ ಪ್ರಕಾರ ತಡೆಯಲು ರಾಜ್ಯ ಪೊಲೀಸರು ಮತ್ತು ಬಿಎಸ್ಎಫ್ ಎಲ್ಲವನ್ನು ಮಾಡಲಿದೆ ಎಂದು ಅಸ್ಸಾಂ ಡಿಜಿಪಿ ಜಿ ಪಿ ಸಿಂಗ್ ಈ ಹಿಂದೆ ಹೇಳಿದ್ದರು.
