ಉಡುಪಿ :
ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಹಿಜಾಬ್ ಕೇಸರಿ ಶಾಲು ವಿವಾದ ಮುಂದುವರಿದಿದ್ದು, ಸರ್ಕಾರಿ ಕಾಲೇಜು ಬಳಿಕ ಇಂದು ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ.
ವೆಂಕಟರಮಣ ಪದವಿಪೂರ್ವ ಕಾಲೇ ಜಿನ ಹಿಂದೂ ಹುಡುಗರು ಕೇಸರಿ ಶಾಲು ಧರಿಸಿ ಕುಂದಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ್ದು, ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಕಾಲೇಜಿನತ್ತ ಮೆರವಣಿಗೆ ನಡೆಸಿದ್ದಾರೆ.
ಉಡುಪಿಯ ಮಹಿಳಾ ಕಾಲೇಜಿನಲ್ಲಿ ಆರಂಭವಾಗಿದ್ದ ಹಿಜಾಬ್ ವಿವಾದ ಸದ್ಯ ಕುಂದಾಪುರಕ್ಕೂ ವ್ಯಾಪಿಸಿದ್ದು, ಕುಂದಾಪುರ ಕಾಲೇಜು ಬಳಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ