ನವದೆಹಲಿ:
ಆದಿಪುರುಷ್ ಚಿತ್ರದಲ್ಲಿ ಹಿಂದೂ ದೇವತೆಗಳಾದ ರಾಮ, ಸೀತೆ, ಹನುಮಂತ ಮತ್ತು ರಾವಣನನ್ನು ತಪ್ಪಾಗಿ ಚಿತ್ರಿಸಿರುವುದನ್ನು ವಿರೋಧಿಸಿ ಹಿಂದೂ ಸೇನಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ವಿವಾದಿತ ದೃಶ್ಯವನ್ನು ತೆಗೆಯುವವರೆಗೆ ಸಿನಿಮಾ ಮಂದಿರಗಳಲ್ಲಿ ಪ್ರದರ್ಶಿಸದಂತೆ ಹಾಗೂ ಸೆನ್ಸಾರ್ ಮಂಡಳಿಯಿಂದ ಪ್ರಮಾಣಪತ್ರ ನೀಡದಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಈ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದಲ್ಲಿ ಹಿಂದೂ ದೇವತೆಗಳನ್ನು ವಿವಾದಾತ್ಮಕ ರೀತಿಯಲ್ಲಿ ತೋರಿಸಲಾಗಿದೆ ಎಂದು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಈ ರೀತಿಯ ಚಿತ್ರಣವನ್ನು ಯಾವುದೇ ರಾಮಾಯಣದಲ್ಲಿ ಮಾಡಲಾಗಿಲ್ಲ. ಹೀಗೆ ಚಿತ್ರ ನಿರ್ಮಾಪಕರು ದೇವರನ್ನು ಗೇಲಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.