ಹಿರಿಯೂರು : ಲಾರಿಗಳ ಮುಖಾಮುಖಿ ಡಿಕ್ಕಿ ; ಸ್ಥಳದಲ್ಲೇ ಚಾಲಕರ ಸಾವು!

ಹಿರಿಯೂರು : 

      ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರಿಯೂರು-ಹುಳಿಯಾರು ರಸ್ತೆಯಲ್ಲಿ ಇಂದು (ಸೋಮವಾರ) ಬೆಳಗ್ಗೆ ನಡೆದಿದೆ.

     ತಮಿಳುನಾಡು ಹಾಗೂ ಕರ್ನಾಟಕ ನೋಂದಣಿ ಲಾರಿಗಳ ನಡುವೆ ಈ ಅಪಘಾತ ಸಂಭವಿಸಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

     ಹಿರಿಯೂರಿನಿಂದ ಹುಳಿಯಾರು ಕಡೆಗೆ ಹೊರಟಿದ್ದ ಲಾರಿ ಹಾಗೂ ಹುಳಿಯಾರು ಕಡೆಯಿಂದ ಹಿರಿಯೂರಿಗೆ ಬರುತ್ತಿದ್ದ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

      ಹಿರಿಯೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ