ಹಿರಿಯೂರು : ಖಾಸಗಿ ಬಸ್ ಗೆ ಬೆಂಕಿ ….!

ಹಿರಿಯೂರು

   ಟಯರ್ ಸ್ಫೋಟಗೊಂಡು ಖಾಸಗಿ ಬಸ್ ಗೆ ಬೆಂಕಿ ತಗುಲಿ ರಸ್ತೆ ಮಧ್ಯೆಯೇ ಧಗಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗುಯಿಲಾಳ್ ಟೋಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದೆ.

   ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ದುರ್ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟಯರ್ ಸ್ಫೋಟಗೊಂಡ ಕೂಡಲೇ ಟೋಲ್ ಬಳಿ ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

   ಖಾಸಗಿ ಬಸ್ಸು ದಾವಣಗೆರೆಯಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿತ್ತು. ಬಸ್ ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent Articles

spot_img

Related Stories

Share via
Copy link