ಹೊಳಲ್ಕೆರೆ ತಹಸಿಲ್ದಾರ್‌ ಲೋಕಾ ಬಲೆಗೆ…!

ಶಿವಮೊಗ್ಗ:

    ಇಡೀ ರಾಜ್ಯದಲ್ಲಿ ಇತ್ತೀಚಿಗೆ  ನಡೆಯುತ್ತಿರುವ  ದಾಳಿ ಎಲ್ಲರಿಗೂ ಗೊತ್ತಿರುವ ವಿಷಯವೇ ಆದರೆ ಇಂದು ಬೆಳ್ಳಂ ಬೆಳ್ಳಿಗ್ಗೆ   ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಸೋಮವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ನಿವೃತ್ತ ಡಿಸಿಎಫ್ ಐ.ಎಂ. ನಾಗರಾಜ್ ಹಾಗೂ‌ ಹೊಳಲ್ಕೆರೆ ತಹಶೀಲ್ದಾರ್ ಎನ್.ಜೆ.ನಾಗರಾಜ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.

     ನಿವೃತ್ತ ಡಿಸಿಎಫ್ ಐ.ಎಂ ನಾಗರಾಜ್ ರವರ ಶಿವಮೊಗ್ಗ ಮನೆ, ಕಚೇರಿ, ಶಿವಮೊಗ್ಗದ ಗುಡ್ ಲಕ್ ಸರ್ಕಲ್ ಬಳಿ ಇರುವ ಕಾಂಪ್ಲೆಕ್ಸ್, ಶಿವಮೊಗ್ಗ ಹೊರವಲಯದ ಅನುಪಿನಕಟ್ಟೆ ಬಳಿ ಇರುವ ವಿಸ್ಮಯ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ. ಜೊತೆಗೆ ದಾವಣಗೆರೆಯ ಹೊನ್ನಾಳಿ ಬಳಿಯ ತೋಟದ ಮನೆ ಮೇಲೆ ಸಹ ದಾಳಿ ಮಾಡಲಾಗಿದೆ.

     ಶಿವಮೊಗ್ಗದ ಶಿಕಾರಿಪುರದಲ್ಲಿರುವ ತಹಶಿಲ್ದಾರ್ ನಾಗರಾಜ್ ಅವರಿಗೆ ಅಧಿಕಾರಿಗಳು ಶಾಕ್ ನೀಡಿದ್ದು, ಇಬ್ಬರು ಅಧಿಕಾರಿಗಳ ನೇತೃತ್ವದ ತಂಡದಿಂದ ಏಳು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಹೊಳಲ್ಕೆರೆ ಪಟ್ಟಣದಲ್ಲಿನ ತಾಲೂಕು ಕಚೇರಿ ಮೇಲೂ ದಾಳಿ ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap