ಹಿರಿಯೂರು :
ತಾಲ್ಲೂಕಿನಲ್ಲಿ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು, ಲಸಿಕೆಯಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರುವುದಿಲ್ಲ, ಜನರು ಮೂಢನಂಬಿಕೆಗಳಿಗೆ ಒಳಗಾಗಿ ಲಸಿಕೆ ನಿರಾಕರಿಸಬೇಡಿ ಎಂಬುದಾಗಿ ಮಸ್ಕಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ನಾಗರಾಜ್ ಹೇಳಿದರು.
ತಾಲ್ಲೂಕಿನ ಮಸ್ಕಲ್ ಗ್ರಾಮಪಂಚಾಯತ್ ವ್ಯಾಪ್ತಿಯ ಮೂರನೇ ವಾರ್ಡಿನಲ್ಲಿ ಮನೆಮನೆಗೆ ತೆರಳಿ ಲಸಿಕೆ ಹಾಕುವ ಮೂಲಕ ಉಚಿತ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ನಡೆಸಿ, ಅವರು ಮಾತನಾಡಿದರು.
ಕೊರೊನಾ ಮೂರನೆಯ ಅಲೆಯನ್ನು ನಿಯಂತ್ರಿಸಬೇಕಾಗಲ್ಲಿ, ಪ್ರತಿಯೊಬ್ಬರು ಲಸಿಕೆಯನ್ನು ಹಾಕಿಸಿಕೊಳ್ಳುವ ಮೂಲಕ ಕೋವಿಡ್ ಬಾರದಂತೆ ಎಚ್ಚರ ವಹಿಸಬೇಕಾಗಿದೆ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರಲ್ಲದೆ,ಲಸಿಕೆ ಹಾಕಿಸಿಕೊಂಡಿಲ್ಲದ ಪ್ರತಿಯೊಂದು ಮನೆಗೆ ತೆರಳಿ ಲಸಿಕೆ ಹಾಕಲಾಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳಾದ ವಸಂತಮ್ಮ, ಶೃತಿ, ಮಂಜುನಾಥ್, ಪುಟ್ಟರಂಗಪ್ಪ ಹಾಗೂ ಅಂಗನವಾಡಿ ಕಾರ್ಯಕರ್ತರಾದ ಕರಿಯಮ್ಮ ನಳಿನ ಪವಿತ್ರಮ್ಮ, ಆಶಾ ಕಾರ್ಯಕರ್ತರಾದ ಶಿವಮ್ಮ, ಗೀತಮ್ಮ, ಉಮಕ್ಕ, ಗ್ರಾಮ ಪಂಚಾಯಿತಿ ವ್ಯಾಪ್ತಿ ಮಸ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
