ಪ್ರಜಾಪ್ರಗತಿ ನಾಗಣ್ಣ ಅವರಿಗೆ ಅಭಿನಂದನಾ ಕಾರ್ಯಕ್ರಮ

ಬೆಂಗಳೂರು:

     ಪತ್ರಿಕೋದ್ಯಮ ಸುಧೀರ್ಘ ಸೇವೆಗಾಗಿ ತುಮಕೂರು ವಿಶ್ವವಿದ್ಯಾನಿಲಯ ಕೊಡ ಮಾಡುವ ಗೌರವ ಡಾಕ್ಟರೇಟ್ ಹಿರಿಮೆಗೆ ಪಾತ್ರರಾಗಿರುವ ಪ್ರಜಾಪ್ರಗತಿ ಪತ್ರಿಕೆಯ ಸಂಪಾದಕರಾದ ಎಸ್.ನಾಗಣ್ಣ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ(ಕೆಯುಡಬ್ಲೂಜೆ) ಅಭಿನಂದನಾ ಕಾರ್ಯಕ್ರಮವನ್ನು ಸೆ.1ರಂದು ಸೋಮವಾರ ಬೆಳಿಗ್ಗೆ 11ಕ್ಕೆ ಕೆಯುಡಬ್ಲೂಜೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಎಚ್.ಬಿ.ಮದನಗೌಡ ಅವರು ಅಭಿನಂದನಾ ನುಡಿ ನುಡಿಯಲಿದ್ದಾರೆ.

ಗಿರೀಶ್ ಲಿಂಗಣ್ಣಗೆ ಸನ್ಮಾನ:

     ಇದೇ ಸಂದರ್ಭದಲ್ಲಿ ಸಂಶೋದಾನ್ಮಕ ಮತ್ತು ವೈಜ್ಞಾನಿಕ ವರದಿಗಳಿಗಾಗಿ ಕೆಯುಡಬ್ಲೂಜೆಯಲ್ಲಿ ದತ್ತಿ ನಿಧಿ ಪ್ರಶಸ್ತಿ ಸ್ಥಾಪನೆ ಮಾಡಿರುವ ಗಿರೀಶ್ ಲಿಂಗಣ್ಣ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Recent Articles

spot_img

Related Stories

Share via
Copy link