ಆಸ್ಪತ್ರೆಯಲ್ಲಿ ಮಹಿಳೆಯರು ಬಟ್ಟೆ ಬದಲಿಸುವ ದೃಶ್ಯ ರೆಕಾರ್ಡ್‌ ಮಾಡುತ್ತಿದ್ದ ಸಿಬ್ಬಂದಿ ಅರೆಸ್ಟ್

ಬೆಂಗಳೂರು:

     ಆಘಾತಕಾರಿ ಘಟನೆಯೊಂದು ನಡೆದಿದ್ದು, ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಘಟಕದ ಡ್ರೆಸ್ಸಿಂಗ್  ರೂಂನಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವಾಗ ರಹಸ್ಯವಾಗಿ ವಿಡಿಯೋ ಮಾಡುತ್ತಿದ್ದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೋಲೀಸರು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಘಟಕದ ಡ್ರೆಸ್ಸಿಂಗ್ ರೂಂನಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವಾಗ ರಹಸ್ಯವಾಗಿ ವಿಡಿಯೋ ಮಾಡುತ್ತಿದ್ದ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ನಾಗರಬಾವಿ ಹಾಸಗಿ ಆಸ್ಪತ್ರೆಯ ನಿರ್ದೇಶಕ ಡಾ. ಚೇತನ್ ನೀಡಿದ ದೂರಿನ ಆಧಾರದ ಮೇಲೆ ಆಸ್ಪತ್ರೆಯ ಜೂನಿಯರ್ ಟೆಕ್ನಿಷಿಯನ್ ಸುವೆಂದು ಮಹಾಂತ(23) ಎಂಬುವನನ್ನು ಬಂಧಿಸಲಾಗಿದೆ.

   ಡಿಸೆಂಬರ್ 20ರಂದು ಬೆಳಗ್ಗೆ 8.30 ರ ಸುಮಾರಿಗೆ ಆಸ್ಪತ್ರೆಯ ಶಸ್ತ್ರಚಿಕಿತ್ಸ ಘಟಕದ ಡ್ರೆಸ್ಸಿಂಗ್ ರೂಂನಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವಾಗ ಆರೋಪಿ ಮೊಬೈಲ್ ಫೋನ್ ಬಳಸಿಕೊಂಡು ರಹಸ್ಯವಾಗಿ ವಿಡಿಯೋ ಮಾಡುತ್ತಿದ್ದ. ಇದನ್ನು ಗಮನಿಸಿದ ಮತ್ತೊಬ್ಬ ಮಹಿಳಾ ಸಿಬ್ಬಂದಿ ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿಸಿದ್ದಾರೆ. ಮಹಿಳೆಯ ಆರೋಪದ ಮೇರೆಗೆ ಪೊಲೀಸರಿಗೆ ದೂರು ನೀಡಲಾಗಿದೆ. ಆರೋಪಿ ಮೊಬೈಲ್ ಪರಿಶೀಲಿಸಿದಾಗ ರಹಸ್ಯವಾಗಿ ವಿಡಿಯೋ ಮಾಡುತ್ತಿರುವುದು ತಿಳಿದುಬಂದಿದೆ. ಸದ್ಯ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.

   ಪ್ರತ್ಯೇಕ ಘಟನೆಯಲ್ಲಿ ವಿದ್ಯಾರ್ಥಿನಿ  ಜೊತೆಗೆ ಅಸಭ್ಯವಾಗಿ ವರ್ತನೆ ಮಾಡಿದ್ದ ವಿಚಾರವಾಗಿ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಗರ್ಲ್ಸ್​ ಹೈಸ್ಕೂಲ್‌ನ ಪ್ರಿನ್ಸಿಪಾಲ್​​​​ರಿಗೆ ಗ್ರಾಮಸ್ಥರು ಧರ್ಮದೇಟು ನೀಡಿದ್ದಾರೆ. ಆ ಬಳಿಕ ಪೋಕ್ಸೋ ಕಾಯ್ದೆಯಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಬೆಳಗುಂದಿ ಗ್ರಾಮದ ಗರ್ಲ್ಸ್​ ಹೈಸ್ಕೂಲ್‌ನ ಕಲ್ಲಪ್ಪ ಬೆಳಗಾಂವಕರ್​ ಎಂಬ ಪ್ರಿನ್ಸಿಪಾಲ್​ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅಶ್ಲೀಲ ಮೆಸೇಜ್ ಮಾಡಿದ್ದ ಆರೋಪವೂ ಕೇಳಿಬಂದಿತ್ತು. 

   ಆದರೆ ಘಟನೆ ಬಗ್ಗೆ ಪೋಷಕರು ಹಾಗೂ ಶಾಲಾ ವಿದ್ಯಾರ್ಥಿಗಳು ದೂರು ನೀಡಿದ್ದರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದ್ದರು. ವಿದ್ಯಾರ್ಥಿನಿ ಕುಟುಂಬಸ್ಥರು ದೂರು ಕೊಡುತ್ತಾರೆಂದು ಕಾಯುತ್ತಿದ್ದೆವು. ಆದರೆ ಯಾರು ದೂರು‌ ನೀಡದ ಹಿನ್ನೆಲೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ. ಯಾವುದೇ ಒತ್ತಡಕ್ಕೆ ಮಣಿಯದೆ ಪ್ರಕರಣದ ತನಿಖೆ‌ ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link