ಮಧ್ಯ ಪ್ರದೇಶ : ಅತ್ಯಾಚಾರಿಯ ಮನೆ ನೆಲಸಮ…!

ಭೋಪಾಲ್: 

    ಇತ್ತೀಚೆಗೆ ಸಾಮೂಹಿಕ ಅತ್ಯಾಚಾರ ಪ್ರಕರಣ ಹೆಚ್ಚಾಗಿದ್ದು ಮಧ್ಯ ಪ್ರದೇಶದಲ್ಲಿ ಆರೋಪಿಯ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಕೆಡವಲಾಯಿತು. ಈ ಘಟನೆ ಮಧ್ಯ ಪ್ರದೇಶದ ದಾಮೋಹ್​ನಲ್ಲಿ ನಡೆದಿದ್ದು, ಕೆಡವಲಾದ ಮನೆಯು ಕೌಶಲ್ ಕೆ. ಚೌಬೆ ಎಂಬ ವ್ಯಕ್ತಿಗೆ ಸೇರಿದ್ದಾಗಿದೆ. ಆರೋಪಿ ಚೌಬೆ, ದಾಮೋಹ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳಲ್ಲಿ ಒಬ್ಬರು. 

ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರಿಂದ ಅದನ್ನು ಕೆಡವಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಧ್ಯಪ್ರದೇಶದ ಪೊಲೀಸರು ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ. 

ಪ್ರಕರಣದ ಇತರ ಮೂವರು ಆರೋಪಿಗಳನ್ನು ಈ ಹಿಂದೆಯೇ ಬಂಧಿಸಲಾಗಿ ಮಾ.10ರಂದು ಮತ್ತೋರ್ವ ಆರೋಪಿ ಕಿಶೋರ್‌ನನ್ನು ಬಂಧಿಸಲಾಗಿದೆ. ಅಪರಾಧ ಕೃತ್ಯಗಳಲ್ಲಿ ತೊಡಗುವವರಲ್ಲಿ ಭಯ ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಪ್ರಶಿತಾ ಕುರ್ಮಿ ತಿಳಿಸಿದ್ದಾರೆ. 

ಮಹಿಳಾ ಪೊಲೀಸ್ ಅಧಿಕಾರಿಗಳು ಜಿಲ್ಲಾಧಿಕಾರಿಯಿಂದ ಅನುಮತಿ ಪಡೆದು ಬುಲ್ಡೋಜರ್ ಬಳಸಿ ಆರೋಪಿಯ ಮನೆ ಕೆಡವಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap