ವಸತಿ ಯೋಜನೆ ಫಲಾನುಭವಿಗಳ `ಆದಾಯ ಮಿತಿ’ ಹೆಚ್ಚಳ : ಸಚಿವ ವಿ.ಸೋಮಣ್ಣ

ಬೆಂಗಳೂರು :

ವಸತಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸರ್ಕಾರಿ ವಸತಿ ಯೋಜನೆಗಳ ಫಲಾನುಭವಿಗಳಿಗೆ ನಿಗದಿಪಡಿಸಿರುವ ಆದಾಯ ಮಿತಿಯನ್ನು ಪರಿಷ್ಕರಿಸಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಸರ್ಕಾರಿ ವಸತಿ ಯೋಜನೆಗಳ ಫಲಾನುಭವಿಗಳಿಗೆ ನಿಗದಿಪಡಿಸಿರುವ ಆದಾಯ ಮಿತಿಯನ್ನು ಪರಿಷ್ಕರಿಸಲಾಗಿದೆ.

ಗ್ರಾಮೀಣ ಭಾಗದಲ್ಲಿ 37 ಸಾವಿರ ರೂ. ಬದಲಿಗೆ 1.20 ಲಕ್ಷ ರೂ. ಹಾಗೂ ನಗರ ಭಾಗದಲ್ಲಿರುವವರಿಗೆ 87 ಸಾವಿರ ರೂ. ಬದಲಿಗೆ 3 ಲಕ್ಷ ರೂ.ಗೆ ನಿಗದಿಪಡಿಸಲಾಗಿದೆ.

 

ಇನ್ನು ಕೋಲಾರದಲ್ಲಿ ಹಿಂದಿನ ಅವಧಿಯಲ್ಲಿದ್ದ ಜಿಲ್ಲಾಧಿಕಾರಿಗಳು 45 ಸಾವಿರ ರೂ.ಗಿಂತ ಕಡಿಮೆ ಆದಾಯ ಇರುವಂತೆ ಪ್ರಮಾಣ ಪತ್ರ ನೀಡಬೇಡಿ ಎಂದು ಆದೇಶಿಸಿದ್ದರು. ಹೀಗಾಗಿ ಸಮಸ್ಯೆಯಾಗಿತ್ತು. ತಕ್ಷಣ ಈ ಆದೇಶ ಹಿಂಪಡೆದು ಸಮಸ್ಯೆ ಬಗೆಹರಿಸುವಂತೆ ಕಂದಾಯ ಇಲಾಖೆ ಮೂಲಕ ಸೂಚನೆ ನೀಡಲಾಗುವುದು ಎಂದು ಹೇಳಿದ್ದಾರೆ.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap