ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ…..: ಹೇಗೆ ಅರ್ಜಿ ಸಲ್ಲಿಸುವುದು

ಬೆಂಗಳೂರು:

   ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಬೆಂಗಳೂರು ಒನ್, ಕರ್ನಾಟಕ ಒನ್ ಮುಂತಾದ ಕಡೆಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.

   ಬಿಪಿಎಲ್ ಕಾರ್ಡ್ ಕುರಿತು ಸಿಎಂ ಮಹತ್ವದ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ಶೇಕಡಾ 80ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ಆದರೆ ತಮಿಳುನಾಡಿನಲ್ಲಿ ಶೇಕಡಾ 40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇಕಡಾ 5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದ್ದಾರೆ.

   ಇನ್ನೂ ಜೂನ್ 30ರ ಒಳಗೆ ಈ ಒಂದು ಕೆಲಸ ಮಾಡಿಲ್ಲ ಅಂದರೆ ಜುಲೈ 1ರಿಂದ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎನ್ನುವ ಹಾಗಿತ್ತು. ಆದರೆ ಈಗ ಕೇಂದ್ರ ಸರ್ಕಾರ ಈ ಗಡುವನ್ನು ಹೆಚ್ಚಳ ಮಾಡಿದ್ದು, ಸೆಪ್ಟೆಂಬರ್ 30ರ ವರೆಗು ಆಧಾರ್ ಲಿಂಕ್ ಮಾಡುವುದಕ್ಕೆ ಸಮಯ ನೀಡಲಾಗಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap