ವಾಹನ ಮಾಲಿಕರಿಗೆ ರಿಲೀಫ್‌, HSRP ಅಳವಡಿಕೆ ಡೆಡ್‌ಲೈನ್‌ ವಿಸ್ತರಣೆ….!

ಬೆಂಗಳೂರು:

    ರಾಜ್ಯ ಸಾರಿಗೆ ಇಲಾಖೆ   ವಾಹನ ಮಾಲಿಕರಿಗೆ ಮತ್ತೊಮ್ಮೆ ಬಿಗ್ ರಿಲೀಫ್ ನೀಡಿದೆ. HSRP ನಂಬರ್ ಪ್ಲೇಟ್ ಅಳವಡಿಕೆಗೆ ಇದ್ದು ಗಡುವನ್ನು ಜನವರಿ 31 ರವರೆಗೆ ವಿಸ್ತರಿಸಿದೆ.

   ಜನವರಿ 31ರವರೆಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಇದುವರೆಗೂ ಆರು ಬಾರಿ ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ನೀಡಿತ್ತು. ಇದೀಗ ಮತ್ತೊಮ್ಮೆ ಅವಕಾಶ ನೀಡಿದ್ದು, ಜನವರಿ 31ರವರೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ರಾಜ್ಯ ಸಾರಿಗೆ ಇಲಾಖೆ ಗಡು ವಿಸ್ತರಿಸಿ ಆದೇಶ ಹೊರಡಿಸಿದೆ.

   ಈ ವಿಚಾರವಾಗಿ ಮುಂದಿನ ಆದೇಶದವರೆಗೂ ವಾಹನ ಮಾಲೀಕರ ಮೇಲೆ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಕಳೆದ ಒಂದೂವರೆ ವರ್ಷದಿಂದ ಎರಡು ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ 56.40 ಲಕ್ಷ ವಾಹನಗಳಿಗೆ ಮಾತ್ರ ಎಚ್ಎಸ್ಆರ್ಪಿ ನಂಬರ್ ಪ್ಲೇಟ್‌ ಅಳವಡಿಕೆ ಮಾಡಲಾಗಿದೆ. ಇನ್ನೂ 1.40 ಕೋಟಿ ಹಳೆಯ ವಾಹನಗಳು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿದೆ. 

   ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್‌ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ.

Recent Articles

spot_img

Related Stories

Share via
Copy link