ದೆಹಲಿ:
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಮತ್ತು ಮಧ್ಯಂತರ ಬಜೆಟ್ ಅನ್ನು ಅರುಣ್ ಜೇಟ್ಲಿ ಅವರ ಬದಲಿಗೆ ವಿತ್ತ ಸಚಿವ ಪಿಯೂಷ್ ಗೋಯಲ್ ಇಂದು ಮಂಡಿಸಿದ್ದಾರೆ.
ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯದಿಂದ ಬಳಲುತ್ತಿರುವ ಕಾರಣದಿಂದಾಗಿ ಅವರ ಅನುಪಸ್ಥಿತಿಯಲ್ಲಿ ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಪಿಯೂಷ್ ಗೋಯಲ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್ ಅನ್ನು ಮಂಡಿಸಿದ್ದಾರೆ.
ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್‌ನಲ್ಲಿ ರಕ್ಷಣಾ ವಲಯಕ್ಕೆ ಭಾರೀ ಮೊತ್ತವನ್ನು ಮೀಸಲಿರಿಸಲಾಗಿದ್ದು, ದೇಶದ ಭದ್ರತೆ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ.
ಅದರಂತೆ ರಕ್ಷಣಾ ವಲಯಕ್ಕೆ 3 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತ ಮೀಸಲಿರಿಸಲಾಗಿದ್ದು, ಕಳೆದ 2 ವರ್ಷಗಳಲ್ಲಿ ಇಪಿಎಫ್‌ಒ ಸದಸ್ಯರ ಸಂಖ್ಯೆ 2 ಕೋಟಿಗೆ ಏರಿಕೆಯಾಗಿದೆ ಎಂದು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ತಿಳಿಸಿದ್ದಾರೆ.
ಸೈನ್ಯಕ್ಕೆ ಆಧುನಿಕ ಶಸ್ತ್ರಾಸ್ತ್ರಗಳ ಖರೀದಿ, ಸೈನಿಕರ ಯೋಗಕ್ಷೇಮ ವೃದ್ಧಿಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ 3 ಲಕ್ಷ ಕೋಟಿ ರೂ.ಗಳನ್ನು ಬಳಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ