ಹುಬ್ಬಳ್ಳಿ:
ಆಟೋ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಗುಡ್ಡದ ಹುಲಿಕಟ್ಟಿಗೆ ಕೂಲಿ ಕೆಲಸಕ್ಕೆ ಆಟೋದಲ್ಲಿ ಹೊರಟಿದ್ದ ಕಾರ್ಮಿಕರ ಮೇಲೆ ಟ್ರ್ಯಾಕ್ಟರ್ ಹರಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
