ಹುಬ್ಬಳ್ಳಿ:
ತೀವ್ರ ಪೈಪೋಟಿಯಿಂದ ಕೂಡಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನ ಬಿಜೆಪಿ ಪಾಲಾಗಿದೆ.
ಇಂದು ನಡೆದ ಚುನಾವಣೆಯಲ್ಲಿ 46 ಮತಗಳನ್ನು ಪಡೆಯುವ ಮೂಲಕ ಮೇಯರ್ ಆಗಿ ಬಿಜೆಪಿಯ ವೀಣಾ ಬಾರದ್ವಾಡ್ ಆಯ್ಕೆಯಾಗಿದ್ದರೆ, ಬಿಜೆಪಿಯ ಸತೀಶ್ ಹಾನಗಲ್ ಸಹ 46 ಮತಗಳನ್ನು ಪಡೆಯುವ ಮೂಲಕ ಉಪ ಮೇಯರ್ ಆಗಿ ಆಯ್ಕೆಯಾದರು.
ಇನ್ನು ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಸುವರ್ಣ ಸ್ಪರ್ಧಿಸಿದ್ದು ಅವರ ಪರ 37 ಮತಗಳು ಮಾತ್ರ ಚಲಾವಣೆಗೊಂಡಿವೆ. ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿತ್ತು. ಈ ಹಿನ್ನೆಲೆಯಲ್ಲಿ ಮೇಯರ್ ಸ್ಥಾನದ ಚುನಾವಣೆಗೆ ಬಿಜೆಪಿಯಿಂದ ವೀಣಾ ಬರದ್ವಾಡ್ ನಾಮಪತ್ರ ಸಲ್ಲಿಸಿದ್ದರೆ, ಕಾಂಗ್ರೆಸ್ನಿಂದ ಸುವರ್ಣ ಅವರು ನಾಮಪತ್ರ ಸಲ್ಲಿಸಿದ್ದರು.
ಇನ್ನು 8 ಜನಪ್ರತಿನಿಧಿಗಳು, 4 ಶಾಸಕರು, 1 ಸಂಸದ, 3 ಎಂಎಲ್ಸಿ ಪಾಲಿಕೆ ವ್ಯಾಪ್ತಿಯ ಜನಪ್ರತಿನಿಧಿಗಳು ಸೇರಿಸಿ ಒಟ್ಟು 90 ಮತಗಳಿದ್ದವು, ಇದರಲ್ಲಿ ಬಿಜೆಪಿ ಮೇಯರ್ ಅಭ್ಯರ್ಥಿ ಪರ 46 ಮತಗಳು ಚಲಾವಣೆಯಾಗಿದ್ದರೆ, ಕಾಂಗ್ರೆಸ್ನ ಸುವರ್ಣ ಅವರ ಪರ 37 ಮತಗಳ ಚಲಾವಣೆಯಾಗಿವೆ.