ಮಂಗಳೂರು ಮತ್ತು ಕಲಬುರ್ಗಿಯಲ್ಲಿ ಹಜ್ ಭವನ ನಿರ್ಮಾಣಕ್ಕೆ ಅನುದಾನ : ಸಿಎಂ

ಬೆಂಗಳೂರು:

    ಮಂಗಳೂರು ಮತ್ತು ಕಲಬುರ್ಗಿಯಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ ಒದಗಿಸಲಾಗಿದೆ. ಕಲಬುರ್ಗಿಯಲ್ಲಿ ಸ್ಥಳ ಸಿಗದೇ ವಿಳಂಬವಾಗಿದೆ. ಮಂಗಳೂರಿನಲ್ಲಿ ಸ್ಥಳ ಗುರುತಿಸಲಾಗಿದೆ ಎಂದರು. ನೀತಿ ಸಂಹಿತೆ ಮುಗಿದ ಮೇಲೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

    ಅವರು ಇಂದು ಬೆಂಗಳೂರಿನ ಹೆಗಡೆ ನಗರದಲ್ಲಿರುವ ಹಜ್ ಭವನ್ ದಲ್ಲಿ ಆಯೋಜಿಸಲಾಗಿದ್ದ ಹಜ್ ಯಾತ್ರಾರ್ಥಿ ಗಳಿಗೆ ಬೀಳ್ಕೊಡುಗೆ ಸಮಾರಂಭ ದಲ್ಲಿ ಭಾಗವಹಿಸಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.ಪ್ರತಿ ದಿನ ಹಜ್ ಗೆ ತೆರಳುವವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸಚಿವ ಜಮೀರ್ ಅಹಮ್ಮದ್ ಅವರನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.

    10168 ಹಜ್ ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಕೋರಿದ್ದೇನೆ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ನೆಲಸಲಿ ಎಂದು ಪ್ರಾರ್ಥಿಸುವಂತೆ ತಿಳಿಸಿದ್ದೇನೆ. ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದಂತೆ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಭೌದ್ಧ, ಸಿಖ್ ಧರ್ಮದವರೆಲ್ಲಾ ಒಂದು ತಾಯಿಯ ಮಕ್ಕಳಂತೆ ಇರಬೇಕು. ಅಂಥ ವಾತಾವರಣ ನಿರ್ಮಾಣವಾಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ಬಂದು ಎಲ್ಲರೂ ಸಬಲರಾಗಬೇಕು. ಅದಕ್ಕೆ ಹಜ್ ಯಾತ್ರಿಗಳು ಪ್ರಾರ್ಥಿಸಲಿ. ಪ್ರಸ್ತುತ ಆರ್ಥಿಕ ವರ್ಷದಲ್ಲಿ ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆ ಬರಲಿ, ನಾಡು ಸಮೃದ್ಧವಾಗಲಿ ಎಂದು ಪ್ರಾರ್ಥಿಸುವಂತೆ ಎಲ್ಲಾ ಯಾತ್ರಾರ್ಥಿಗಳಲ್ಲಿ ಮನವಿ ಮಾಡುವುದಾಗಿ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap