ಹುಳಿಯಾರು :
ಜನವರಿ 1ರಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿ ಆರಂಭಕ್ಕೆ ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಹುಳಿಯಾರು ಹೋಬಳಿಯ ಶಾಲಾಕಾಲೇಜಿಗಳು ವಿದ್ಯಾರ್ಥಿಗಳ ಆಗಮನಕ್ಕೆ ಕೋವಿಡ್ ಮಾರ್ಗಸೂಚಿಯಂತೆ ಸಿದ್ಧತೆ ಮಾಡಿಕೊಂಡಿವೆ.
ಶಾಲೆ ಆರಂಭದ ಮೊದಲು ಎಲ್ಲ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಕೋವಿಡ್-19 ಆರ್‍ಟಿ-ಪಿಸಿಆರ್ ಋಣಾತ್ಮಕ ಪರೀಕ್ಷಾ ವರದಿ ನೀಡುವಂತೆ ತಿಳಿಸಲಾಗಿದೆ. ಅಲ್ಲದೆ ಪಟ್ಟಣ ಪಂಚಾಯ್ತಿ ಸಹಕಾರದೊಂದಿಗೆ ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ವಿದ್ಯಾರ್ಥಿಗಳಿಗೂ ಕೋವಿಡ್ ಥರ್ಮಲ್ ಸ್ಯಾನಿಂಗ್ ಮಾಡಲು ಸಿದ್ಧತೆ ನಡೆದಿದೆ.
ಅಲ್ಲದೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮ ಪಾಲಿಸುವಂತೆ ಸೂಚಿಸಲಾಗಿದೆಯಲ್ಲದೆ ಮಾಸ್ಕ್ ಧಾರಣೆ, ಕೈಗಳ ಶುಚಿತ್ವ ಮತ್ತು ವೈಯಕ್ತಿಕ ಅಂತರ ಕಾಪಾಡಬೇಕು. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಲಾಗಿದೆ.
6 ರಿಂದ 9 ನೇ ತರಗತಿಗೆ ವಿದ್ಯಾಗಮ ಕಾರ್ಯಕ್ರಮ ನಡೆಸಲು, 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಮಕ್ಕಳನ್ನು ತಂಡವಾಗಿ ವಿಂಗಡಿಸಿ ಕಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ 10 ತಿಂಗಳ ನಂತರ ಶಾಲೆ ಆರಂಭವಾಗುತ್ತಿರುವುದರಿಂದ ಸರಳವಾಗಿ ಪ್ರಾರಂಭೋತ್ಸವ ಸಹ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
