ಹುಳಿಯಾರು : ಸ್ಥಳೀಯ ಮುಖಂಡರ ಒಮ್ಮತದ ಅಭ್ಯರ್ಥಿಗಳು ಪ.ಪಂ. ಕಣಕ್ಕೆ

 ಹುಳಿಯಾರು : 

      ಹುಳಿಯಾರು ಪಟ್ಟಣ ಪಂಚಾಯ್ತಿ ಚುನಾವಣೆಗೆ ಜೆಡಿಎಸ್‍ನಿಂದ ಸ್ಪರ್ಧಿಸುವ ಸ್ಪರ್ಧಾಕಾಂಕ್ಷಿಗಳು ಬಹಳಷ್ಟು ಮಂದಿ ಇದ್ದಾರೆ. ಇವರಲ್ಲಿ ಪಕ್ಷದ ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಶಾಸಕ ಸಿ.ಬಿ.ಸುರೇಶ್‍ಬಾಬು ಅವರು ತಿಳಿಸಿದರು.

      ಹುಳಿಯಾರು ಪಟ್ಟಣ ಪಂಚಾಯ್ತಿ ಚುನಾವಣೆ ಸಂಬಂಧ ವೈ.ಎಸ್.ಪಾಳ್ಯದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಹುಳಿಯಾರಿನ ಜೆಡಿಎಸ್ ಕಾರ್ಯಕರ್ತರು ತಮ್ಮ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಜನಾಭಿಪ್ರಾಯವಿರುವ, ಗೆದ್ದೇಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಬೇಕಿದೆ. ಆಕಾಂಕ್ಷಿಗಳೆಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲವಾದ್ದರಿಂದ ಟಿಕೆಟ್ ಸಿಗದವರು ಬೇಸರ ಪಟ್ಟುಕೊಳ್ಳದೆ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಒಗ್ಗಟ್ಟಿನ ಹೋರಾಟ ಮಾಡಬೇಕಿದೆ. ಸಮರ್ಥ ಅಭ್ಯರ್ಥಿಗಳು ಸಿಗದ ವಾರ್ಡ್‍ಗಳಲ್ಲಿ ಜನಾನುರಾಗಿ ವ್ಯಕ್ತಿಯನ್ನು ಹುಡುಕಿ ಪಕ್ಷದಿಂದ ಸ್ಪರ್ಧಿಸುವಂತೆ ಮನವೊಲಿಸುವ ಕಾರ್ಯ ಮಾಡಬೇಕಿದೆ ಎಂದು ಅವರು ಹೇಳಿದರು.

ತಾಪಂ ಸದಸ್ಯ ಎಚ್.ಎನ್.ಕುಮಾರ್, ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಗವೀರಂಗನಾಥ ಗೌಡಿ, ಮುಖಂಡರುಗಳಾದ ಸೈಯದ್ ಜಲಾಲ್, ಏಜಾಸ್, ಪಪಂ ಮಾಜಿ ಉಪಾಧ್ಯಕ್ಷ ಗಣೇಶ್, ಪಟಾಕಿ ಶಿವಣ್ಣ, ಡಿಶ್ ಬಾಬು, ಕೃಷ್ಣಮೂರ್ತಿ, ಅಹಮದ್‍ಖಾನ್, ಶಿವನಂಜಪ್ಪ, ರವಿ ಮತ್ತಿತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ