ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ….!

ಚಾಮರಾಜನಗರ

    ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್​ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ  ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವಮೂರ್ತಿ(32) ಮೃತ ಪತಿ. ತಲೆಯಲ್ಲಿ ಕೂದಲಿಲ್ಲ ಎಂದು ಪರಶಿವಮೂರ್ತಿಗೆ ಪತ್ನಿ ಮಮತಾ ಅಪಹಾಸ್ಯ ಮಾಡುತ್ತಿದ್ದರು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ. 

    ಚಾಮರಾಜನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದ ಹಿಂದೆ ಪರಶಿವಮೂರ್ತಿ ಮತ್ತು ಮಮತಾ ಮದುವೆಯಾಗಿದ್ದರು. ವೃತ್ತಿಯಲ್ಲಿ ಪರಶಿವಮೂರ್ತಿ ಲಾರಿ ಚಾಲಕನಾಗಿದ್ದರು. ಮದುವೆ ಬಳಿಕ ಪರಶಿವಮೂರ್ತಿ ಕೂದಲು ಸಂಪೂರ್ಣ ಉದುರಿತ್ತು. ಹೊರಗಡೆ ಹೋದರೆ ನನೆಗೆ ನಾಚಿಕೆಯಾಗುತ್ತೆಂದು ಮಮತಾ ಅಪಹಾಸ್ಯ ಮಾಡುತ್ತಿದ್ದರು ಎನ್ನಲಾಗಿದೆ.

Recent Articles

spot_img

Related Stories

Share via
Copy link