ಬೆಂಗಳೂರು:

ಬೆಂಗಳೂರು,ಏ.15-ಮಾನ್ಯ ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯನವರೇ ನಿಮ್ಮ ಪಕ್ಷದಲ್ಲೇ ಕೂತಿರುವ ಆ ಮಹಾನ್ ನಾಯಕ ಮುಂದೊಂದು ದಿನ ನಿಮಗೂ ಕೂಡ ಖೆಡ್ಡಾ ತೋಡಬಹುದು.ಬೆನ್ನಿಗೆ ಚೂರಿ ಇರಿಯುವ ಮೊದಲು ಯಾವುದಕ್ಕೂ ಹುಷಾರು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಎಚ್ಚರಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅಧಿಕಾರದ ಹಪಾಹಪಿಗೆ ಬಿದ್ದಿರುವ ಬಂಡೆ ಈಗ ಎಲ್ಲೋ ಕುಳಿತು ಇನ್ನೆಲ್ಲೋ ಬಾಂಬ್ ಸಿಡಿಸುವ ಕಲೆಯನ್ನು ರಕ್ತಗತ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಇದು ನಿಮ್ಮ ಕೊರಳಿಗೆ ಉರಳಾದರೂ ಅಚ್ಚರಿಯಿಲ್ಲ.ಬೇಗ ಎಚ್ಚೆತ್ತುಕೊಳ್ಳಿ ಎಂದು ಸಲಹೆ ಮಾಡಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಆ ಮಹಾನ್ ನಾಯಕನಿಗೆ ನೀವು ಪ್ರಬಲ ಸ್ಪರ್ಧೆಯಾಗಬಹುದು.ಅದಕ್ಕಾಗಿ ನಿಮಗೆ ಗೊತ್ತಿಲ್ಲದಂತೆಯೇ ಮುಗಿಸಲು ಯಾವುದಾದರೂ ಹೊಸ ನಾಟಕ ಸೃಷ್ಟಿಸಬಹುದು. ಅಧಿಕಾರಕ್ಕಾಗಿ ಏನನ್ನೂ ಮಾಡದೆ ಬಿಡುವವರಲ್ಲ ಸ್ವಯಂಘೋಷಿತ ಡೈನಾಮಿಕ್ ಬಂಡೆ ಎಂದು ಸಲಹೆ ಮಾಡಿದ್ದಾರೆ.
ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸ ಬರೆದ ‘ಕೆಜಿಎಫ್ ಚಾಪ್ಟರ್ 2’.. ಫಸ್ಟ್ ಡೇ ಕಲೆಕ್ಷನ್ ಏಷ್ಟು ಕೋಟಿ ?
ಎದುರಾಳಿಗಳ ವಿರುದ್ಧ ರಣರಂಗದಲ್ಲಿ ಹೋರಾಡುವ ಬದಲು ವ್ಯವಸ್ಥಿತ ಜಾಲ ರೂಪಿಸಿಕೊಂಡು ಖೆಡ್ಡಾಕ್ಕೆ ಬೀಳಿಸಲು ನುರಿತ ತಂಡವನ್ನು ಕಟ್ಟಿಕೊಂಡಿದ್ದಾರೆ. ಹಗಲು ಕಂಡು ಇರಳಿನಲ್ಲಿ ಬಾವಿಗೆ ಬೀಳಬೇಡಿ! ಕುರ್ಚಿಗಾಗಿ ಏನು ಬೇಕಾದರೂ ಮಾಡುವ ಜಾಯಮಾನ ನಮ್ಮದು ಎಂಬುದನ್ನು ಬಂಡೆಯ ಇತಿಹಾಸವೇ ಹೇಳುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ ಅಂದಿನ ಗೃಹ ಸಚಿವ ಕೆ.ಜೆ.ಜಾಜ್‍ಅವರನ್ನು ಬಂಧಿಸಿ ವಿಚಾರಣೆ ನಡೆಸಲು ಕಾಂಗ್ರೆಸ್ ಸರ್ಕಾರ ಸೂಚನೆ ಅನುಮತಿ ಕೊಟ್ಟಿದ್ದರೆ ನಿಮ್ಮ ಆಹೋರಾತ್ರಿ ಕಪಟ ನಾಟಕದ ಧರಣಿಗೆ ಅರ್ಥ ಬರುತ್ತಿತ್ತು ಅಲ್ಲವೇ ಮಾನ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಅವರು ತನಿಖಾಧಿಕಾರಿಗಳಾಗಬೇಕಿಲ್ಲ: ಮುಕ್ತ ತನಿಖೆಯಾಗಲು ಬಿಡಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕೆ.ಜೆ.ಜಾರ್ಜ್ ವಿರುದ್ದವೂ ಐಪಿಸಿ ಸೆಕ್ಷನ್ 306ರಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆಪಾದನೆಯೇ ಮೇಲೆ ದೂರು ದಾಖಲಾಗಿತ್ತು. ಆವಾಗ ಪೊಲೀಸರು ಏಕೆ ಬಂಧನ ಮಾಡಿರಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾನ್ಯ ಜಾರ್ಜ್ ಅವರು ಆರೋಪಿ ಸ್ಥಾನದಲ್ಲಿ ಇದ್ದಾಗ ಸಿಬಿಐ ಅವರನ್ನು ಬಂಧಿಸಿತ್ತೇ? ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಎಫ್‍ಐಆರ್ ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಪೊಲೀಸರಿಗೆ ಆದೇಶ ಕೊಟ್ಟ ನಂತರವೇ ಎಂಬುದನ್ನು ಮಾನ್ಯ ಸಿದ್ದರಾಮಯ್ಯನವರೇ ಜನತೆಯ ಮುಂದೆ ಬಾಯಿಬಿಡಿ ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಯಕರುಗಳೇ ದೂರುದಾರರು, ತನಿಖಾಧಿಕಾರಿಗಳು,ವಿಚಾರಣಾಧಿಕಾರಿಗಳು, ನ್ಯಾಯಾೀಧಿಶರು,ಆಗುವುದು ಬೇಡ. ನಮ್ಮ ಸರ್ಕಾರ ಮುಕ್ತ ಮತ್ತು ನ್ಯಾಯ ಸಮ್ಮತ ತನಿಖೆ ನಡೆಸಲು ಸಿದ್ದವಿದೆ. ನೆಲದ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದ್ದಾರೆ.ನಿಮ್ಮ ಕಾಲದಲ್ಲಿ ಭ್ರಷ್ಟಾಚಾರದ ಗಂಗೋತ್ರಿಯೇ ಹರಿದಾಡಿತ್ತು ಎಂಬುದನ್ನು ಮರೆಯಬೇಡಿ. ಅರ್ಕಾವತಿ ರಿಡೋ, ಬಿಡಿಎ, ಬಿಬಿಎಂಪಿ, ಪಾವಗಡ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಸೇರಿದಂತೆ ಹತ್ತು ಹಲವು ಎಂದು ಕುಹುಕವಾಡಿದ್ದಾರೆ.
ಕರ್ನಾಟಕದಲ್ಲಿ ಏ. 18ರವರೆಗೆ ಕರ್ನಾಟಕದಲ್ಲಿ ಮಳೆ; ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಸ್ವತಃ ನಿಮ್ಮ ಪಕ್ಷದ ಕಚೇರಿಯಲ್ಲೇ ಪರ್ಸೆಂಟ್ ಜ್ ಜನಕನ ಅಸಲಿ ಬಣ್ಣವನ್ನು ತುಂಬಿದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳ ಮುಂದೆ
ಇಬ್ಬರು ಬಟಾಬಯಲು ಮಾಡಿದ್ದರು. ಒಬ್ಬರಿಗೆ ಪಕ್ಷದಿಂದ ಉಚ್ಚಾಟನೆ ಮತ್ತೊಬ್ಬರಿಗೆ ಪಕ್ಷದ ಉಪಾಧ್ಯಕ್ಷ ಸ್ಥಾನ ಎಂದು ತಿರುಗೇಟು ನೀಡಿದ್ದಾರೆ.ನಿಮ್ಮ ತಟ್ಟೆಯಲ್ಲಿ ಸತ್ತ ಹೆಗ್ಗಣವೇ ಬಿದ್ದಿರುವಾಗ ಬೇರೆಯವರ ತಟ್ಟೆಯಲ್ಲಿ ನೊಣ ಬಿದ್ದಿದ್ದನ್ನು ನೋಡಿ ನಗಬೇಡಿ. ಕಾಲಚಕ್ರ ಉರುಳಲೇಬೇಕು ಎಂದು ರೇಣುಕಾಚಾರ್ಯ ಕಾಂಗ್ರೆಸ್‍ನವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








