ನಾನು ಸಹ ಸಿಎಂ ಆಕಾಂಕ್ಷಯೇ : ಎಂ ಬಿ ಪಾಟೀಲ್‌

ನವದೆಹಲಿ

      ಕರ್ನಾಟಕ ರಾಜ್ಯ ವಿಧಾನಸಭೆಗೆ ದಿನಾಂಕ ಮಾತ್ರವೇ ಘೋಷಣೆಯಾಗಿದೆ, ಮತದಾನ ಪ್ರಕ್ರಿಯೆ ಬಾಕಿ ಇದೆ. ಹೀಗಿರುವಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಚುನಾವಣೆ ಕಾವಿನ ಜೊತೆಗೆ ಸಿಎಂ ಸ್ಥಾನನ ಯಾರಿಗೆ? ಎಂಬ ವಿಚಾರವು ಸಾಕಷ್ಟು ಚರ್ಚೆ ಬರುತ್ತಿದೆ. ಈ ಮಧ್ಯೆ ಮಾಜಿ ಸಚಿವ ಹಾಗೂ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

     ಸದರಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾತ್ರವೇ ಮುಖ್ಯಮಂತ್ರಿಗಳ ಸ್ಥಾನ ಆಕಾಂಕ್ಷಿಗಳಲ್ಲ. ಅವರೊಂದಿಗೆ ನಾವು ಇದ್ದೇವೆ ಎಂದು ಎಂ.ಬಿ.ಪಾಟೀಲ್ ಅವರ ಹೇಳಿಕೆ ಅಚ್ಚರಿ ಮೂಡಿಸಿದೆ.
     ಈ ಸಂಬಂಧ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸುದ್ದಿಗಾರರ ಜೊತೆಗೆ ಗುರುವಾರ ಮಾತನಾಡಿದ ಎಂ.ಬಿ.ಪಾಟೀಲ್, ಪಕ್ಷದ ಈ ಬಾರಿ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಷ್ಟೇ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಲ್ಲ. ನಾನು ಸೇರಿದಂತೆ ಇನ್ನು ಹಲವು ನಾಯಕರು ಈ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಪಟ್ಟಿಯಲ್ಲಿದ್ದೇವೆ ಎಂದು ಅವರು ತಿಳಿಸಿದರು.

    ಕಾಂಗ್ರೆಸ್‌ನಿಂದ ಮುಂಖ್ಯಮಂತ್ರಿಗಳ ಪಟ್ಟಿಯಲ್ಲಿ ನಾನು ಒಳಗೊಂಡಂತೆ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮಾಜಿ ಸಚಿವ ಕೃಷ್ಣಬೈರೇಗೌಡ ಅವರು ಸಹ ಇದ್ದಾರೆ ಎಂದು ಅವರು ಆಕಾಂಕ್ಷಿಗಳ ಹೆಸರು ಬಹಿರಂಗಪಡಿಸಿದರು. ಇನ್ನೂ ಕರ್ನಾಟಕದ ಮಟ್ಟಿಗೆ ನೋಡುವುದಾದರೆ, ವಿಪಕ್ಷ ನಾಯಕರಾದ ನಮ್ಮ ಸಿದ್ದರಾಮಯ್ಯನವರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಉನ್ನತ ನಾಯಕರು. ಅವರ ನಂತರ ಸಿಎಂ ಪಟ್ಟಿಯಲ್ಲಿ ನಾವಿದ್ದೇವೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ