ತುಮಕೂರು ಬ್ರೇಕಿಂಗ್‌ : ನಾನು ಪಕ್ಷದ ಟಿಕೆಟ್‌ ಆಕಾಂಕ್ಷಿಯೇ : ಡಾ.ಎಂ.ಆರ್. ಹುಲಿನಾಯ್ಕರ್

ತುಮಕೂರು:

       ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಲೆ ಎಲ್ಲಾ ಪಕ್ಷಗಳಲ್ಲಿ ಆಕಾಂಕ್ಷಿಗಳ ಪೈಪೊಟಿ ಸಾಮಾನ್ಯ ಆದರೆ ಕೆಲವೊಂದು ಬಾರಿ ಆಕಾಂಕ್ಷಿಗಳ ಪಟ್ಟಿಯಲ್ಲಿಯೇ ಇಲ್ಲದ ಹೆಸರು ಮುನ್ನೆಲೆಗೆ ಬರುವುದು ತೀರ ಕಡಿಮೆ ಇದಕ್ಕೆ ತಾಜಾ ಉದಾಹರಣೆ ತುಮಕೂರು ಬಿಜೆಪಿ ಇದರಲ್ಲಿ ಹಾಲಿ ಶಾಸಕ ಜ್ಯೋತಿಗಣೇಶ್ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ  ನಾನೇ ಅಭ್ಯರ್ಥಿ ಎಂದು ಪೈಪೋಟಿಗೆ ಇಳಿದಿರುವ ನಡುವೆಯೇ ನಾನೂ ಕೂಡ ತುಮಕೂರು ಕ್ಷೇತ್ರದ ಅಭ್ಯರ್ಥಿ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಡಾ.ಎಂ.ಆರ್. ಹುಲಿನಾಯ್ಕರ್ ತಮ್ಮ ಆಪ್ತರ ಬಳಿ ಹೇಳಿಕೊಂಡಿರುವ ವಿಚಾರ ಮುನ್ನೆಲೆಗೆ ಬಂದಿದೆ.

       ಹಾಲಿ ಶಾಸಕ ಜ್ಯೋತಿಗಣೇಶ್ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ನಡುವೆ ಪಕ್ಷದಿಂದ ಟಿಕೆಟ್ ಗಿಟ್ಟಿಸಲು ಪೈಪೋಟಿ ನಡೆಯುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಹಾಗಾಗಿ ಬಿಜೆಪಿಯಲ್ಲಿ ಅಭ್ಯರ್ಥಿಗಳ ಸಂಖ್ಯೆ ಹೆಚ್ಚುತ್ತಿದ್ದು ಗೆಲ್ಲುವ ಕುದುರೆ ಯಾರು ಎಂಬ ಬಗ್ಗೆ ಚರ್ಚೆ ಶುರುವಾಗಿದೆ ಅಲ್ಲದೆ ತುಮಕೂರಿನ ಟಿಕೆಟ್‌ ಯಾರಿಗೆ ಎಂಬ ಕುತೂಹಲವೂ ಮನೆಮಾಡಿದೆ. 

    ಸದ್ಯಕ್ಕಿರುವ ಮಾಹಿತಿ ಪ್ರಕಾರ ಹಾಲಿ ಶಾಸಕ ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ ಮತ್ತು ಉದ್ಯಮಿ ಎನ್.ಎಸ್.ಜಯಕುಮಾರ್ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂಬ ಮಾಹಿತಿಯು ಜನರ ನಡುವೆ ಹರಿದಾಡುತ್ತಿದೆ. ಜ್ಯೋತಿ ಗಣೇಶ್ ಗೆ ವರ್ಚಸ್ಸು ಇಲ್ಲ. ಸೊಗಡು ಶಿವಣ್ಣಗೆ ಟಿಕೆಟ್ ನೀಡುವುದು ಅನುಮಾನ. ಎನ್.ಎಸ್ ಜಯಕುಮಾರ್ ಸಮರ್ಥ ನಾಯಕರಲ್ಲ ಎಂಬುದು ಟಿಕೆಟ್ ನೀಡಲು ಬಿಜೆಪಿ ಹಿಂದೇಟು ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.

     ತುಮಕೂರು ನಗರ ಕ್ಷೇತ್ರಕ್ಕೆ ಅಭ್ಯರ್ಥಿಗಳಾಗಿ ಜ್ಯೋತಿಗಣೇಶ್, ಸೊಗಡು ಶಿವಣ್ಣ ಮತ್ತು ಉದ್ಯಮಿ ಜಯಕುಮಾರ್ ಹೆಸರುಗಳು ಚಾಲ್ತಿಯಲ್ಲಿದ್ದು ಈಗ ಮತ್ತೊಬ್ಬರು ನಾನು ಕೂಡ ಟಿಕೆಟ್ ಆಕಾಂಕ್ಷಿ ಎಂದು ಹುಲಿನಾಯ್ಕರ್ ಹೇಳಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

     ನಾನು ಈಗಾಗಲೇ ವಿಧಾನ ಪರಿಷತ್ ಸದಸ್ಯನಾಗಿ ಉತ್ತಮ ಕೆಲಸ ಮಾಡಿದ್ದೇನೆ. ಜೊತೆಗೆ ಹಿಂದುಳಿದ ವರ್ಗಕ್ಕೆ ಸೇರಿದ್ದೇನೆ. ನನಗೆ ಬೆಂಬಲ ನೀಡಬೇಕು ಎಂದು ಹುಲಿನಾಯ್ಕರ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಹೀಗಾಗಿ ಹುಲಿನಾಯ್ಕರ್ ಟಿಕೆಟ್ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

     ಹುಲಿನಾಯ್ಕರ್ ಜೆಡಿಎಸ್ ನಲ್ಲಿದ್ವವರು. ಜೆಡಿಎಸ್ ಗೆ ರಾಜಿನಾಮೆ ನೀಡಿ ಭಾರತೀಯ ಜನತಾ ಪಕ್ಷಕ್ಕೆ ಬಂದವರು. ಹಲವು ವರ್ಷಗಳಿಂದ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಯಾವುದೇ ಸಮಸ್ಯೆ ಮಾಡಿಕೊಳ್ಳದೆ ನಿಭಾಯಿಸಿಕೊಂಡು ಬಂದವರು. ಸಜ್ಜನ ವ್ಯಕ್ತಿ ಎಂಬ ಹೆಸರು ಮಾಡಿದ್ದು ತಮಗೆ ಟಿಕೆಟ್ ನೀಡಿದರೆ ಗೆಲ್ಲುತ್ತೇನೆ ಎಂದು ಪಕ್ಷದ ರಾಜ್ಯ ನಾಯಕರಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap