ಬೆದರಿಕೆ, ಅನರ್ಹತೆ ಅಥವಾ ಜೈಲು ಶಿಕ್ಷೆಗೆ ನಾನು ಹೆದರುವುದಿಲ್ಲ : ರಾಹುಲ್‌ ಗಾಂಧಿ

ನವದೆಹಲಿ

     ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ  ಸೂರತ್ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ, ರಾಹುಲ್‌ ಗಾಂಧಿ ಅವರು ಪತ್ರಿಕಾಗೋಷ್ಠಿ ನಡೆಸಿ ಅದಾನಿ, ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ನಾನು ಅದಾನಿ ಬಗ್ಗೆ ಒಂದೇ ಒಂದು ಪ್ರಶ್ನೆ ಕೇಳಿದ್ದೆ. ನಾನು ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ ಮತ್ತು ಭಾರತದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತೇನೆ. ಸಂಸತ್ತಿನಲ್ಲಿ ನಾನು ಭಾಷಣ ಮಾಡದಂತೆ ತಡೆಯಲಾಯಿತು. ನಂತರ ನಾನು ಲೋಕಸಭೆ ಸ್ಪೀಕರ್‌ಗೆ ವಿವರವಾದ ಉತ್ತರವನ್ನು ಬರೆದೆ. ಕೆಲವು ಮಂತ್ರಿಗಳು ನನ್ನ ಬಗ್ಗೆ ಸುಳ್ಳು ಹೇಳಿದರು. ಆದರೆ ನಾನು ಪ್ರಶ್ನೆ ಕೇಳುವುದನ್ನು ನಿಲ್ಲಿಸುವುದಿಲ್ಲ. ಪ್ರಧಾನಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧವನ್ನು ಪ್ರಶ್ನಿಸುತ್ತಲೇ ಇರುತ್ತೇನೆ ಎಂದರು.
    ದೇಶದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಈ ಹಿಂದೆಯೂ ಹಲವು ಬಾರಿ ಹೇಳಿದ್ದೆ. ಇಂತಹ ಉದಾಹರಣೆಗಳನ್ನು ನಾವು ಪ್ರತಿದಿನ ನೋಡುತ್ತಿದ್ದೇವೆ. ಪ್ರಧಾನಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧದ ಬಗ್ಗೆ ನಾನು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದೇನೆ, ಕೇಳುತ್ತಲ್ಲೇ ಇರುತ್ತೇನೆ. ಅದಾನಿ ವಿಚಾರದಲ್ಲಿ ಮೋದಿ ಯಾಕೆ ಮೌನಿಯಾಗಿದ್ದಾರೆ. ಅವರು ಈ ದೇಶಕ್ಕೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿ ಮೌನಿಯಾಗಿದ್ದಾರೆ ಎಂದರು.

    ಅದಾನಿ ಶೆಲ್ ಕಂಪನಿಗಳಿಗೆ ಹೋದ ₹20,000 ಕೋಟಿ ಯಾರದು? ಎಂಬ ಸರಳ ಪ್ರಶ್ನೆಯಿಂದ ಪ್ರಧಾನಿಯನ್ನು ರಕ್ಷಿಸಲು ನಡೆಸಲಾದ ಸಂಪೂರ್ಣ ನಾಟಕ ಇದು. ಈ ಬೆದರಿಕೆ, ಅನರ್ಹತೆ ಅಥವಾ ಜೈಲು ಶಿಕ್ಷೆಗೆ ನಾನು ಹೆದರುವುದಿಲ್ಲ. ನನಗೆ ಸತ್ಯವನ್ನು ಹೊರತುಪಡಿಸಿ ಯಾವುದರಲ್ಲೂ ಆಸಕ್ತಿ ಇಲ್ಲ. ನಾನು ಸತ್ಯವನ್ನು ಮಾತ್ರ ಮಾತನಾಡುತ್ತೇನೆ, ಇದು ನನ್ನ ಕೆಲಸ ಮತ್ತು ನನ್ನನ್ನು ಅನರ್ಹಗೊಳಿ ಸಿದರೂ ಅಥವಾ ಬಂಧಿಸಿದರೂ ನಾನು ಸತ್ಯವನ್ನು ಮಾತನಾಡುತ್ತೇನೆ. ಈ ದೇಶ ನನಗೆ ಎಲ್ಲವನ್ನೂ ನೀಡಿದೆ ಮತ್ತು ಅದಕ್ಕಾಗಿಯೇ ನಾನು ಇದನ್ನು ಮಾಡುತ್ತೇನೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap