ಬೆಂಗಳೂರು:
ಕಾಂಗ್ರೆಸ್ ಸಂಸದ ಹಾಗೂ ಸಹೋದರ ಡಿ.ಕೆ.ಸುರೇಶ್ ಅವರನ್ನ ರಾಮನಗರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಮೂಲಕ ರಾಮನಗರ ವಿಧಾನಸಭಾ ಕ್ಷೇತ್ರವನ್ನ ವಶಕ್ಕೆ ಪಡೆಯಲು ಡಿ.ಕೆ ಶಿವಕುಮಾರ್ ಪ್ಲಾನ್ ನಡೆಸಿದ್ದಾರೆ ಎನ್ನಲಾಗಿದೆ , ಆದರೆ ನನಗೆ ರಾಜ್ಯ ರಾಜಕಾರಣದ ಬಗ್ಗೆ ನನಗೆ ಆಸಕ್ತಿ ಇಲ್ಲ ಎಂದು ಸಂಸದ ಡಿಕೆ ಸುರೇಶ್ ಸ್ಪಷ್ಟಪಡಿಸಿದ್ದಾರೆ.
ನನಗೂ ಬೇರೆ ಬೇರೆ ಕ್ಷೇತ್ರಗಳಿಂದ ಚುನಾವಣೆ ಸ್ಪರ್ಧೆಗೆ ಆಹ್ವಾನ ನೀಡುತ್ತಿದ್ದಾರೆ. ಚನ್ನಪಟ್ಟಣ, ರಾಜರಾಜೇಶ್ವರಿ ನಗರ ಸೇರಿದಂತೆ ನನ್ನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 6 ಕ್ಷೇತ್ರಗಳು, ಹೊರಗಿನ 4 ಕ್ಷೇತ್ರಗಳು ಸೇರಿದಂತೆ ಒಟ್ಟು 10 ಕ್ಷೇತ್ರಗಳಿಂದ ನನ್ನ ಸ್ಪರ್ಧೆಗೆ ಆಹ್ವಾನವಿದೆ. ಆದರೆ ನನಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿಯಿಲ್ಲ. ನಾನು ಚುನಾವಣೆಗೆ ಸ್ಪರ್ಧೆ ಮಾಡುವ ಆಸಕ್ತಿಯನ್ನು ಹೊಂದಿಲ್ಲ ಎಂದು ಸ್ಪಷ್ಟನೆ ನೀಡಿದರು
ರಾಮನಗರದಲ್ಲಿ ನಮ್ಮ ಅಭ್ಯರ್ಥಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ನಾಯಕರು ಹೇಳಿದ ಕೂಡಲೇ ಸ್ಪರ್ಧೆ ಮಾಡುವುದಲ್ಲ. ಸ್ಥಳೀಯವಾಗಿ ಕಾರ್ಯಕರ್ತರ ಜೊತೆ ಚರ್ಚೆ ಮಾಡಬೇಕು. ಅವರ ಜೊತೆ ಮಾತನಾಡಿ ತೀರ್ಮಾನ ಮಾಡಬೇಕಾಗುತ್ತದೆ. ನಾನು ಏಕೈಕ ಸಂಸದನಾಗಿದ್ದೇನೆ. ಕಳೆದ 20 ವರ್ಷಗಳಲ್ಲಿ ಉಪಚುನಾವಣೆಗಳನ್ನು ಮಾಡಿ ರೋಸಿ ಹೋಗಿದ್ದೇನೆ. ಎಲ್ಲಾ ಉಪಚುನಾವಣೆಗಳನ್ನು ನಾವು ಮಾಡಿದ್ದೇವೆ. ಈಗ ಉಪಚುನಾವಣೆ ಬಗ್ಗೆ ನನಗೆ ಆಸಕ್ತಿಯಿಲ್ಲ ಎಂದರು.