ಕಲಬುರಗಿ:
ಅಮೆರಿಕದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ.
ನಗರದ ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಖಾಸಗಿಯಾಗಿ ಪ್ರವಾಸಕ್ಕೆ ಹೋಗಿ ಬರಲಾಗಿದೆ.
ಪ್ರಮುಖವಾಗಿ ಅಲ್ಲಿನ ಚುನಾವಣೆ ರೀತಿ, ನಿಯಮಗಳನ್ನು ಅರಿಯಲಾಗಿದೆ ಎಂದು ವಿವರಣೆ ನೀಡಿದರು.ನಾಗಮಂಗಲದಲ್ಲಿನ ಅಹಿತಕರ ಘಟನೆಗೆ ಸಂಬಂಧ ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ. ಮುನಿರತ್ನ ಪ್ರಕರಣ ಕುರಿತಾಗಿ ಹೆಚ್ಚಿನ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ಡಿಕೆಶಿ ತಿಳಿಸಿದರು.