ಬಳ್ಳಾರಿ ಗುಂಪು ಘರ್ಷಣೆ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು

    ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪು ಘರ್ಷಣೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಸಿಎಂ ಅವರು ಶುಕ್ರವಾರ ಮಾತನಾಡಿದರು.

    ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರಬಹುದು, ಆದ್ದರಿಂದ ಈ ಬಗ್ಗೆ ತನಿಖೆ ನಡೆಯಬೇಕಿದೆ ಎಂದರು.

Recent Articles

spot_img

Related Stories

Share via
Copy link