ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಯಾವ ಕಡೆ ಇದ್ದಾರೆ ಎಂಬುದು ಗೊತ್ತಾಗಿದೆ. ಅವರು ಈಗಾಗಲೇ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರವಾದಂತೆ ವಿಷಯಗಳು ಹೆಚ್ಚು ಸ್ಪಷ್ಟವಾಗುತ್ತವೆ ಎಂದು ಪವಾರ್ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಎಎಪಿಯನ್ನು ಒಳಗೊಂಡಿರುವ ಯಾವುದೇ ಮೈತ್ರಿಯ ಭಾಗವಾಗಿರಲು ಸಾಧ್ಯವಿಲ್ಲ ಎಂದು ಎಸ್ಎಡಿ ಹೇಳಿದೆ.
ಎಸ್‌ಎಡಿ ನಾಯಕ ಬಲ್ವಿಂದರ್ ಸಿಂಗ್ ಭುಂದರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರಲು ತಮ್ಮ ಪಕ್ಷವನ್ನು ಸಂಪರ್ಕಿಸಲಾಗಿದೆ. ಆದರೆ, ಪಕ್ಷವು ಅದರಿಂದ ದೂರ ಉಳಿಯುತ್ತದೆ ಎಂದು ಖಚಿತಪಡಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರುವಂತೆ ಎಸ್‌ಎಡಿ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳವನ್ನು ಸಂಪರ್ಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.