I.N.D.I.A ಸಭೆಯಿಂದ ದೂರ ಉಳಿದ ಆ ಎರಡು ಪಕ್ಷಗಳಾವು ಗೊತ್ತೆ…?

ಮುಂಬೈ :
 
    ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ 28 ರಾಜಕೀಯ ಪಕ್ಷಗಳ 63 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಹೇಳಿದ್ದಾರೆ.
 
     ಕಳೆದ ಬಾರಿ ಸಭೆ ಸೇರಿದಾಗ 26 ಪಕ್ಷಗಳು ಭಾಗವಹಿಸಿದ್ದವು. ಮುಂಬೈ: ಇಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ 28 ರಾಜಕೀಯ ಪಕ್ಷಗಳ 63 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಹೇಳಿದ್ದಾರೆ. ಕಳೆದ ಬಾರಿ ಸಭೆ ಸೇರಿದಾಗ 26 ಪಕ್ಷಗಳು ಭಾಗವಹಿಸಿದ್ದವು.
    2020ರಲ್ಲಿ ಎನ್ಡಿಎ ತೊರೆದ ಶಿರೋಮಣಿ ಅಕಾಲಿದಳ (ಎಸ್ಎಡಿ) ಮತ್ತು ಬಿಎಸ್ಪಿ ಎಂಬ ಎರಡು ಪಕ್ಷಗಳು ಇಂಡಿಯಾ ಮೈತ್ರಿಕೂಟಕ್ಕೆ ಸೇರುತ್ತಿಲ್ಲ. ಈ ನಿರ್ಧಾರದ ಹಿಂದೆ ಅವೆರಡಕ್ಕೂ ತಮ್ಮದೇ ಆದ ಕಾರಣಗಳಿವೆ ಎಂದು ಪವಾರ್ ಉಲ್ಲೇಖಿಸಿದ್ದಾರೆ. ಎಸ್ಎಡಿಗೆ ಪಂಜಾಬ್ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ನೇರ ಪ್ರತಿಸ್ಪರ್ಧಿಗಳಾಗಿವೆ. ಸದ್ಯ ಮೈತ್ರಿಕೂಟದ ಪಾಲುದಾರರಿಗೆ ನೋವುಂಟು ಮಾಡುವ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ.

    ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಯಾವ ಕಡೆ ಇದ್ದಾರೆ ಎಂಬುದು ಗೊತ್ತಾಗಿದೆ. ಅವರು ಈಗಾಗಲೇ ಬಿಜೆಪಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆ ಹತ್ತಿರವಾದಂತೆ ವಿಷಯಗಳು ಹೆಚ್ಚು ಸ್ಪಷ್ಟವಾಗುತ್ತವೆ ಎಂದು ಪವಾರ್ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಎಎಪಿಯನ್ನು ಒಳಗೊಂಡಿರುವ ಯಾವುದೇ ಮೈತ್ರಿಯ ಭಾಗವಾಗಿರಲು ಸಾಧ್ಯವಿಲ್ಲ ಎಂದು ಎಸ್ಎಡಿ ಹೇಳಿದೆ.

     ಎಸ್‌ಎಡಿ ನಾಯಕ ಬಲ್ವಿಂದರ್ ಸಿಂಗ್ ಭುಂದರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರಲು ತಮ್ಮ ಪಕ್ಷವನ್ನು ಸಂಪರ್ಕಿಸಲಾಗಿದೆ. ಆದರೆ, ಪಕ್ಷವು ಅದರಿಂದ ದೂರ ಉಳಿಯುತ್ತದೆ ಎಂದು ಖಚಿತಪಡಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರುವಂತೆ ಎಸ್‌ಎಡಿ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳವನ್ನು ಸಂಪರ್ಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

     ಮಾಯಾವತಿ ಕೂಡ ಬಿಎಸ್ಪಿ ಚುನಾವಣೆಯಲ್ಲಿ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. ತಾವು ಎನ್ಡಿಎ ಮತ್ತು ಇಂಡಿಯಾದಿಂದ ಸಮಾನ ಅಂತರ ಕಾಯ್ದುಕೊಳ್ಳುವ ತಮ್ಮ ನಿಲುವನ್ನು ಪುನರುಚ್ಚರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ