ಶಿವಮೊಗ್ಗ
ಈಗಾಗಲೇ ಹಲವು ಸಮೀಕ್ಷೆಗಳಲ್ಲಿ ಆಡಳಿತರೂಢ ಬಿಜೆಪಿಗೆ ಅಘಾತವಾಗಿದ್ದು, ಮೋದಿ ಅಲೆ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ಮುಂದಾಗಿವೆ. ಇತ್ತ ರಾಜಕೀಯ ಪಕ್ಷಗಳ ನಾವೇ ಅಧಿಕಾರಕ್ಕೆ ಬರುವುದಾಗಿ ವಿಶ್ವಾಸವನ್ನ ವ್ಯಕ್ತಪಡಿಸಿದ್ದು, ಮತ್ತೆ ಕುಮಾರಸ್ವಾಮಿ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಆರು ದಿನಗಳಷ್ಟೇ ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಅಂತಿಮ ಹಂತದಲ್ಲಿ ಮತ ಓಲೈಕೆಗೆ ರಾಜಕೀಯ ಪಕ್ಷಗಳು ಮುಂದಾಗಿದ್ದು, ಹಿಂದಿನ ಸರ್ಕಾರದ ಸಾಧನೆಗಳ ಜೊತೆಗೆ ಬಜರಂಗಿಯೇ ರಾಜಕೀಯ ಪಕ್ಷಗಳ ಜಟಾಪಟಿಗೆ ಕಾರಣವಾಗಿದೆ.
ಶಿವಮೊಗ್ಗದಲ್ಲಿ ಜಾತ್ಯತೀತ ಜನತಾದಳ ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಹಲವು ಸಮೀಕ್ಷೆಯನ್ನ ಯಾವುದೇ ಕಾರಣಕ್ಕೂ ನಂಬಬೇಡಿ. ನನ್ನ ಮೇಲೆ ದೈವ ಶಕ್ತಿ ಇದೆ. ಹೀಗಾಗಿ, ನನ್ನನ್ನು ಬಿಟ್ಟರೆ ಬೇರೆಯವರು ಮುಖ್ಯಮಂತ್ರಿ ಆಗಲ್ಲಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಭವಿಷ್ಯ ನುಡಿದಿದ್ದಾರೆ.







