ಬೆಂಗಳೂರು:
ಸಚಿವ ಡಿ.ಸುಧಾಕರ ವಿರುದ್ಧ ಎಫ್ ಐ ಆರ್ ದಾಖಲು ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.ಅವರ ವಿರುದ್ಧ (ಸುಧಾಕರ್) ಜಾತಿ ನಿಂದನೆ ಕೇಸ್ ದಾಖಲಾಗಿದ್ಯಾ..? ಅವರನ್ನ ಕರೆದು ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಅವರ ಮೇಲೆ ಕೇಸ್ ರಿಜಿಸ್ಟರ್ ಆಗಿದೆ. ನಾನು ಪತ್ರಿಕೆಯಲ್ಲಿ ನೋಡಿದ್ದೇನೆ. ಏನಾಗಿದೆ ಎಂದು ಕರೆದು ಮಾತನಾಡುತ್ತೇನೆ ಎಂದ ಸಿಎಂ ಹೇಳಿದರು.ಡಿ ಸುಧಾಕರ್ ವಿರುದ್ಧ ಎಫ್ ಐ ಆರ್ ದಾಖಲು ವಿಚಾರ ಗೃಹ ಸಚಿವ ಪರಮೇಶ್ವರ್ ಕೂಡ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಬಗ್ಗೆ ವರದಿ ಕೇಳಿದ್ದೇನೆ. ಅಧಿಕಾರಿಗಳಿಗೆ ಬ್ರಿಫಿಂಗ್ ಕೊಡಲು ಹೇಳಿದ್ದೇನೆ. ವರದಿ ಬಂದ ಬಳಿಕ ಮುಂದಿನ ಕ್ರಮದ ಚರ್ಚೆ ಮಾಡುತ್ತೇವೆ ಎಂದರು.
ವಿಷಯ ಏನು ಎಂದು ರಿಪೋರ್ಟ್ ತೆಗೆದುಕೊಳ್ಳಬೇಕಾಗುತ್ತದೆ. ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದರು.
ಬಿಜೆಪಿಯವರು ಸಚಿವರ ವಜಾಕ್ಕೆ ಆಗ್ರಹಿಸಿರುಬ ಬಗ್ಗೆ ಮಾತನಾಡಿ, ಬಿಜೆಪಿ ಅವರು ಹೇಳಲಿ. ಅವರು ಹೇಳೋದನ್ನು ಬೇಡ ಅನ್ನಲು ಆಗೊಲ್ಲ. ವಿಪಕ್ಷಗಳು ಕೇಳೋದೇ ಅವರ ಸ್ವಾಭಾವ ಅವರು ಕೇಳಲಿ. ಕೇಸಿನ ಬಗ್ಗೆ ಹೆಚ್ಚಿನ ಮಾಹಿತಿ, ವರದಿ ಕೇಳಿದ್ದೇನೆ. ವರದಿ ಬಂದ ಬಳಿಕ ಮಾಹಿತಿ ನೀಡುತ್ತೇನೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ