ಕುಮಾರಸ್ವಾಮಿ ಹೇಳಿದ ಕಡೆ ಪ್ರಚಾರ ಮಾಡುವೆ : ಹೆಚ್‌ ಡಿ ದೇವೇಗೌಡ

ಬೆಂಗಳೂರು: 

     ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಆಸ್ಪತ್ರೆ ಸೇರಿದ್ದು, ಪುತ್ರನ ಅನುಪಸ್ಥಿತಿಯಲ್ಲಿ ಜೆಡಿಎಸ್ ಮುಖಂಡ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ವೈದ್ಯರ ಸಲಹೆಗೆ ವಿರುದ್ಧವಾಗಿ ತಮ್ಮ 92ನೇ ವಯಸ್ಸಿನಲ್ಲಿಯೂ ಪೂರ್ಣ ಪ್ರಮಾಣದ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ.

    ನಿರ್ಣಾಯಕ ಘಟ್ಟದಲ್ಲಿ ಪುತ್ರನ ಅನುಪಸ್ಥಿತಿಯನ್ನು ಸರಿದೂಗಿಸಲು, ದೈಹಿಕವಾಗಿ ಅಸಮರ್ಥರಾಗಿದ್ದರೂ ಸಹ ದೇವೇಗೌಡರು ಚುನಾವಣಾ ಪ್ರಚಾರ ಕಣಕ್ಕಿಳಿದಿದ್ದಾರೆ.

    ಕುಮಾರಸ್ವಾಮಿ ಹೇಳಿದ ಕಡೆ ಪ್ರಚಾರ ಮಾಡುತ್ತೇನೆ. ಇಲ್ಲಿ ಕೆಲವು ಅಭಿಮಾನಿಗಳು ನನ್ನ ಹೆಗಲ ಮೇಲೆ ಕುರಿ ಹೊರಿಸಿದ್ರು. ನನಗೆ 92 ವರ್ಷ ವಯಸ್ಸಾದ್ರೂ ನಿಮ್ಮ ಮುಂದೆ ಅದನ್ನು ಪ್ರದರ್ಶಿಸಿದ್ದೇನೆ. ಕುಮಾರಸ್ವಾಮಿ ಆಸ್ಪತ್ರೆಯಲ್ಲಿದ್ದಾರೆ, ಅದೆಲ್ಲ ದೇವರ ಇಚ್ಚೆ. ಕುಮಾರಸ್ವಾಮಿ ಮತ್ತೆ ಪ್ರಚಾರ ಮಾಡ್ತಾರೆ ಎಂದರು.

     ಚುನಾವಣೆ ಘೋಷಣೆಯಾದಾಗಿನಿಂದಲೂ ತೀವ್ರ ಪ್ರಚಾರ ನಡೆಸುತ್ತಿದ್ದ ಕುಮಾರಸ್ವಾಮಿ ಅವರು ನಿಶ್ಯಕ್ತಿಯೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳ ಅಬ್ಬರದ ಪ್ರಚಾರದ ವಿರುದ್ಧ ಏಕಾಂಗಿಯಾಗಿ ನಿಂತು ಪ್ರಚಾರದಲ್ಲಿ ತೊಡಗಿದ್ದ ಅವರು, ಇದೀಗ ಆಸ್ಪತ್ರೆಯಿಂದಲೇ ರಣತಂತ್ರ ರೂಪಿಸುತ್ತಿದ್ದಾರೆ.
      ಸೋಮವಾರ ಜೆಡಿಎಸ್‌ನ ಭದ್ರಕೋಟೆ ಎನಿಸಿರುವ 11 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ ನಗರಗಳಲ್ಲಿ ಪ್ರಚಾರಕ್ಕೆ ಎಚ್‌ಡಿ ದೇವೇಗೌಡರು ಮುಂದಾಗಿದ್ದಾರೆ. ಇದಾದ ಬಳಿಕ ಮಂಗಳವಾರ, ಮೈಸೂರು ಜಿಲ್ಲೆಗೆ ಆಗಮಿಸಿ ಪಿರಿಯಾಪಟ್ಟಣ, ಹುಣಸೂರು, ಕೆ.ಆರ್. ನಗರ ಪಟ್ಟಣಗಳಲ್ಲಿ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap