ಪೂರ್ಣಗೊಂಡ ನಂತರ ಅಯೋಧ್ಯೆಗೆ ಭೇಟಿ : ಶರದ್‌ ಪವಾರ್

ಮುಂಬೈ:

    ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಅಯೋಧ್ಯೆಗೆ ಭೇಟಿ ನೀಡಿ ಶ್ರೀರಾಮನಿಗೆ ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಬುಧವಾರ ಹೇಳಿದ್ದಾರೆ.

    ಈ ಸಂಬಂಧ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರಿಗೆ ಪತ್ರ ಬರೆದಿರುವ ಶರದ್ ಪವಾರ್ ಅವರು, ಜನವರಿ 22 ರಂದು ದೇವಸ್ಥಾನದಲ್ಲಿ ನಡೆಯುವ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದ್ದಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಆದರೆ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

    ಮರ್ಯಾದಾ ಪುರಷೋತ್ತಮ ಶ್ರೀರಾಮನು ನಂಬಿಕೆ ಮತ್ತು ಭಕ್ತಿಯ ಪ್ರತೀಕ. ರಾಮಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ ಎಂದಿದ್ದಾರೆ.

    ಜನವರಿ 22ರ ನಂತರ ರಾಮಲಲ್ಲಾನ ದರ್ಶನ ಸುಲಭವಾಗಲಿದೆ. ಮುಂದಿನ ದಿನಗಳಲ್ಲಿ ನಾನು ಅಯೋಧ್ಯೆಗೆ ಭೇಟಿ ನೀಡಿ, ರಾಮ್ ಲಲ್ಲಾಗೆ ಪ್ರಾರ್ಥನೆ ಸಲ್ಲಿಸುತ್ತೇನೆ. ಅಷ್ಟರೊಳಗೆ ಮಂದಿರ ನಿರ್ಮಾಣವೂ ಪೂರ್ಣಗೊಳ್ಳಲಿದೆ ಎಂದು ಎನ್ ಸಿಪಿ ಮುಖ್ಯಸ್ಥರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap