ಲಂಡನ್ :
ಜೈಲಿನಲ್ಲಿರುವಾಗ ನನ್ನ ಮೇಲೆ ಮೂರು ಬಾರಿ ಹಲ್ಲೆಗೊಳಗಾಗಿದ್ದು, ನನ್ನನ್ನು ಭಾರತಕ್ಕೆ ಹಸ್ತಾಂತರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದಾರೆ.
ಪಂಚಾಜ್ ನ್ಯಾಷನಲ್ ಬ್ಯಾಂಕ್‌ಗೆ 9,100 ಕೋಟಿ ರೂ. ವಂಚನೆಗೈದ ಪ್ರಕರಣದಲ್ಲಿ ಲಂಡನ್ ನ ಜೈಲಿನಲ್ಲಿರುವ ವಜ್ರೋದ್ಯಮಿ ನೀರವ್ ಮೋದಿ ಬುಧವಾರ ಇಂಗ್ಲೆಂಡ್‌ನ ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹಾಜರಾಗಿದ್ದು, ಆದರೂ ನ್ಯಾಯಾಲಯ ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ. ಜಾಮೀನು ಅರ್ಜಿ ವಜಾಗೊಳಿಸಿದ ಬಳಿಕ ನ್ಯಾಯಾಲಯದಲ್ಲಿ ತಾಳ್ಮೆ ಕಳೆದುಕೊಂಡ ನೀರವ್ ಮೋದಿ, ನನ್ನನ್ನು ಭಾರತಕ್ಕೆ ಹಸ್ತಾಂತರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.
ನೀರವ್ ಮೋದಿ 5 ನೇ ಬಾರಿಗೆ ಜಾಮೀನು ಅರ್ಜಿ ಸಲ್ಲಿಸಿದ್ದರು ಮತ್ತು ವಿಚಾರಣೆಯ ವೇಳೆ ಅವರು ನ್ಯಾಯಾಲಯವನ್ನು ದಾರಿ ತಪ್ಪಿಸಲು ಪ್ರಯತ್ನಿಸಿದರು. ಆದರೆ, ಈ ಎಲ್ಲದರ ಹೊರತಾಗಿಯೂ, ನ್ಯಾಯಾಲಯ ಅವರಿಗೆ ಜಾಮೀನು ನೀಡಲು ನಿರಾಕರಿಸಿತು. ನೀರವ್ ಅವರು ಚಡಪಡಿಕೆ ಮತ್ತು ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
