ಬೆಂಗಳೂರು
ಕೆಲದಿನಗಳ ಹಿಂದೆಯಷ್ಟೆ ವಿದಾಯದ ಭಾಷಣ ಮಾಡಿದ್ದ ಶಿಕಾರಿಪುರದ ರಾಜಹುಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ನಾನು ಮನೆಯಲ್ಲಿ ಸುಮ್ಮನೆ ಕೂತು ಕಾಲ ಕಳೆಯುವುದಿಲ್ಲ ನಾನು ರಾಜ್ಯವಿಡೀ ಪರಿಯಟನೆ ಮಾಡಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಈ ಕುರಿತು ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಮಾತನಾಡಿ, 130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇನೆ. ಚುನಾವಣಾ ರಾಜಕೀಯದಿಂದ ಮಾತ್ರ ನಾನು ಹಿಂದೆ ಸರಿದಿದ್ದೇನೆ, ಆದರೆ ಪಕ್ಷವನ್ನ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ ಹೇಳಿದ್ದಾರೆ.