ಬೀದರ್‌ : ನಾಮಪತ್ರ ಹಿಂಪಡೆಯುವುದಿಲ್ಲ : ಚಂದ್ರಾ ಸಿಂಗ್‌

ಬೀದರ್‌: 

      ಕರ್ನಾಟಕದ ಮುಕುಟದಂತಿರುವ  ಬೀದರ್ ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳು,ನನಗೆ ಸೋಲುವ ಭೀತಿ ಇದ್ದು ಅದಕ್ಕಾಗಿ  ನಾನು ನಾಮಪತ್ರ ಹಿಂತೆಗೆದುಕೊಳ್ಳುತ್ತಿದ್ದೇನೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ನಾಮಪತ್ರವನ್ನು ಹಿಂತೆಗೆದುಕೊಳ್ಳುವುದಿಲ್ಲ’ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಚಂದ್ರಾಸಿಂಗ್ ಸ್ಪಷ್ಟಪಡಿಸಿದ್ದಾರೆ.

ರಾಜಕೀಯ ಪಕ್ಷಗಳ ಮುಖಂಡರು ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಯಾರು ಏನೇ ಅಂದರೂ. ಎಷ್ಟೇ ಒತ್ತಡ ಬಂದರೂ ನಾನು ನಾಮಪತ್ರ ಹಿಂತೆಗೆದುಕೊಳ್ಳುತ್ತಿಲ್ಲ. ಕಾರ್ಯಕರ್ತರು. ಬೆಂಬಲಿಗರು. ಮುಖಂಡರು ಯಾವುದೇ ಆತಂಕ ಪಡಬೇಕಿಲ್ಲ ಎಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ