ಬೆಂಗಳೂರು:
ನಾಳೆಯಿಂದ ಮುಂದಿನ 11 ದಿನಗಳಲ್ಲಿ 42 ಸ್ಥಳಗಳಲ್ಲಿ ತಮ್ಮ ಪಕ್ಷದ ಪರ ಪ್ರಚಾರ ನಡೆಸುವುದಾಗಿ ದೇವೇಗೌಡರು ಹೇಳಿದ್ದಾರೆ.ತಮ್ಮ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಾರಕ್ಕೊಮ್ಮೆ ವಿಶ್ರಾಂತಿ ತೆಗೆದುಕೊಳ್ಳುವುದಾಗಿ 89 ವರ್ಷದ ಮಾಜಿ ಪ್ರಧಾನಿ ತಿಳಿಸಿದ್ದಾರೆ.
ನಾಳೆಯಿಂದ ಮೇ 8ರವರೆಗೆ 42 ಕಡೆ ಪ್ರಚಾರ ನಡೆಸುತ್ತೇನೆ. ಇದೊಂದು ತಾತ್ಕಾಲಿಕ ಕಾರ್ಯಕ್ರಮ. ವಾರಕ್ಕೊಮ್ಮೆ ಇಂಜೆಕ್ಷನ್ ತೆಗೆದುಕೊಳ್ಳಬೇಕಾಗಿರುವುದರಿಂದ ಆರೋಗ್ಯದ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಾರಕ್ಕೊಮ್ಮೆ ವಿಶ್ರಾಂತಿ ತೆಗೆದುಕೊಳ್ಳುತ್ತೇನೆ ಎಂದು ದೇವೇಗೌಡ ಅವರು ಹೇಳಿದ್ದಾರೆ. ದೇವೇಗೌಡ ಅವರು ಮೇ 18ಕ್ಕೆ 90ನೇ ವರ್ಷಕ್ಕೆ ಕಾಲಿಡಲಿದ್ದಾರೆ.
![](https://prajapragathi.com/wp-content/uploads/2023/04/Untitled-10-2.jpg)