IAS ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಜೈಲು ಪಾಲು

ಪುಣೆ:

    ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೆಲವು ವ್ಯಕ್ತಿಗಳಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧಿತರಾಗಿರುವ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಸೋಮವಾರ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

    ಮನೋರಮಾ ಖೇಡ್ಕರ್ ಅವರ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಯ ವಿಚಾರಣೆ ನಡೆಸಿದ ಕೋರ್ಟ್, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.ಗ್ರಾಮಸ್ಥರಿಗೆ ಬಂದೂಕು ತೋರಿಸಿ ಬೆದರಿಕೆ ಹಾಕುವ ಮೂಲಕ ಪರವಾನಗಿ ಪಡೆದ ಗನ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಪುಣೆ ಪೊಲೀಸರು ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.

    ಪುಣೆ ಜಿಲ್ಲೆಯ ಮುಲ್ಶಿ ತಹಸಿಲ್‌ನಲ್ಲಿ ಮಹಾರಾಷ್ಟ್ರದ ನಿವೃತ್ತ ಸರ್ಕಾರಿ ಅಧಿಕಾರಿಯಾಗಿರುವ ಪೂಜಾ ಅವರ ತಂದೆ ದಿಲೀಪ್ ಖೇಡ್ಕರ್ ಅವರು ಖರೀದಿಸಿದ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದ್ದು, ಈ ವೇಳೆ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರು ರೈತರಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link