ನೀತಿ ಸಂಹಿತೆ ಉಲ್ಲಂಘಿಸಿದರೆ ಬೀಳುತ್ತೇ ಕೇಸ್‌ …!

ಬೆಂಗಳೂರು :

     ಕೆಲ ವರ್ಷಗಳ ವರೆಗೆ ಯಾವದೇ ರೀತಿಯ ಪ್ರಚಾರಕ್ಕಾಗಿ ರಿಕ್ಷಾ ಬಳಕೆ ಸರ್ವೇ ಸಾಮಾನ್ಯವಾಗಿತ್ತು ಆದರೆ ಬದಲಾದ ಸನ್ನಿವೇಶದಲ್ಲಿ  ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು, ಆಟೋಗಳ ಮೇಲಿನ ರಾಜಕೀಯ ಸ್ಟಿಕ್ಕರ್, ಬ್ಯಾನರ್ ಗಳನ್ನು ನಿಷೇಧ ಮಾಡಲಾಗಿದೆ. ಈ ಕುರಿತು ಮಾತನಾಡಿರುವ ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಹಾಲಸ್ವಾಮಿ, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಆಟೋಗಳ ಮೇಲೆ ರಾಜಕೀಯ ಪ್ರಚಾರ ಮಾಡಬಾರದು.

    ಇದುವರೆಗೂ 450 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ದಂಡ ವಸೂಲಿ ಸಹ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಸಾರಿಗೆ ಅಧಿಕಾರಿಗಳು ರಾಜಕೀಯ ನಾಯಕರ ಭಾವಚಿತ್ರ ಹಾಗೂ ಪಕ್ಷಗಳ ಚಿಹ್ನೆ ಹೊಂದಿರುವ ಆಟೋಗಳ ಮೇಲೆ ದಾಳಿ ನಡೆಸಿ ಬ್ಯಾನರ್, ಸ್ಟಿಕ್ಕರ್ ಗಳನ್ನು ತೆರವುಗೊಳಿಸಿ ಪ್ರಕರಣ ದಾಖಲಿಸುವ ಕಾರ್ಯಾಚರಣೆ ಮಾಡಿದ್ದು, ಈವರೆಗೆ ಬೆಂಗಳೂರು ನಗರದಲ್ಲಿರುವ 11 ಆರ್ ಟಿಒ ವಲಯಗಳಲ್ಲಿ 450 ಕ್ಕೂ ಹೆಚ್ಚು ಪ್ರಕರಣಗಳನ್ನು ಸಾರಿಗೆ ಅಧಿಕಾರಿಗಳು ದಾಖಲಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ