ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ನಿಧನ….!

ಕಲಬುರಗಿ: 

   ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ (80) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಸಂತಾಪ‌ ಸೂಚಿಸಿದ್ದಾರೆ.

   ಅನಾರೋಗ್ಯದಿಂದ ಬಳಲುತ್ತಿದ್ದ ಇಕ್ಬಾಲ್ ಅಹ್ಮದ್ ಸರಡಗಿ ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯರಾತ್ರಿ 01 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ದರ್ಗಾ ಪ್ರದೇಶದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ಕುಟುಂಬದ ಮೂಲಗಳ ಪ್ರಕಾರ, ಬುಧವಾರ ಸಂಜೆ ಹಫ್ತ್ ಗುಂಬಜ್ ಸಮೀಪದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

    ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಇಕ್ಬಾಲ್ ಅಹಮದ್ ಸರಡಗಿ ಅವರು 1999 ಮತ್ತು 2004ರಲ್ಲಿ ಸಂಸದರಾದರು. 2008ರಲ್ಲಿ ಕ್ಷೇತ್ರಗಳ ವಿಂಗಡಣೆಯ ನಂತರ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರಿಂದ ಕ್ಷೇತ್ರದಲ್ಲಿ ಖರ್ಗೆ ಅವರು ಸ್ಪರ್ಧಿಸಿದರು. ಇಕ್ಬಾಲ್ ಅವರು ಒಂದು ಬಾರಿ ವಿಧಾನ ಪರಿಷತ್ತಿನ ಸದಸ್ಯರೂ ಆಗಿದ್ದರು. 1944ರ ಜೂನ್ 5ರಂದು ಮೊಹಮದ್ ಅಹಮದ್ ಸರಡಗಿ ಮತ್ತು ಗೌಹರ್ ಬೇಗಂ ದಂಪತಿಗೆ ಜನಿಸಿದ್ದ ಇಕ್ಬಾಲ್, ಕಲಬುರಗಿಯ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಪದವಿ ಹಾಗೂ ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ದಿ ಎನ್.ಧರ್ಮಸಿಂಗ್ ಪರಮಾಪ್ತರಾಗಿದ್ದರು.

    ಇಕ್ಬಾಲ್ ಅಹಮದ್ ಸರಡಗಿ ನಿಧನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap