ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೆರೆಗೆ ತಳ್ಳಿ ಕೊಂದ ಪತ್ನಿ

ಹಾವೇರಿ:

    ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಪತ್ನಿಯೇ  ಪ್ರಿಯಕರನ  ಜೊತೆ ಸೇರಿಕೊಂಡು ಪತಿಯನ್ನೇ  ಕೆರೆಗೆ ತಳ್ಳಿ ಕೊಲೆ  ಮಾಡಿರುವ ಘಟನೆ ಹಾವೇರಿಯ  ರಟ್ಟಿಹಳ್ಳಿ ತಾಲೂಕಿನಲ್ಲಿ ನಡೆದಿದೆ. ಹರಿಹರ ಮೂಲದ ಶಫಿವುಲ್ಲಾ ಅಬ್ದುಲ್ ಮಹೀಬ್ (38) ಕೊಲೆಯಾದ ಪತಿ ಎಂದು ಗುರುತಿಸಲಾಗಿದೆ. ತಮ್ಮಿಬ್ಬರ ಪ್ರಣಯ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಶಫಿವುಲ್ಲಾ ಅಬ್ದುಲ್ ಮಹೀಬ್‌ನನ್ನು ಕರೆಗೆ ತಳ್ಳಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಬಿಂಬಿಸಿದ್ದರು.

   ಮುಬಾರಕ್ ಖಲಂದರಸಾಬ್ ಮತ್ತು ಶಹೀನಾಬಾನು ಮಧ್ಯೆ ಅನೈತಿಕ ಸಂಬಂಧ ಇತ್ತು. ಮುಬಾರಕ್ ಖಲಂದರಸಾಬ್‌ನನ್ನು ಮದುವೆ ಆಗುವಂತೆ ಶಹೀನಾಬಾನು ಪೀಡಿಸುತ್ತಿದ್ದಳು. ನಮ್ಮಿಬ್ಬರ ಮದುವೆಗೆ ನಿನ್ನ ಪತಿ ಅಡ್ಡಿಯಾಗಿದ್ದಾನೆಂದು ಹೇಳಿದ್ದ. ಹೀಗಾಗಿ ಇಬ್ಬರೂ ಸೇರಿ ಶಫೀವುಲ್ಲಾನ ಹತ್ಯೆಗೆ ಸಂಚು ರೂಪಿಸಿದ್ದರು. ಬಳಿಕ ಮುಬಾರಕ್ ಖಲಂದರಸಾಬ್, ಶಫೀವುಲ್ಲಾ ಜೊತೆ ಗೆಳೆತನ ಬೆಳಸಿ ಮನೆಗೆ ಬಂದು ಹೋಗಿ ಮಾಡುತ್ತಿದ್ದ. ಅದರಂತೆ ಜುಲೈ 27ರಂದು ಕೆರೆ ನೋಡಲು ಹೋಗೋಣ ಎಂದು ಪುಸಲಾಯಿಸಿ ಶಫೀವುಲ್ಲಾನನ್ನು ಕೆರೆ ಕಡೆ ಕರೆದುಕೊಂಡು ಹೋಗಿದ್ದು, ಅಲ್ಲಿ ಭರ್ಜರಿ ಎಣ್ಣೆ ಪಾರ್ಟಿ ಮಾಡಿದ್ದಾರೆ.

   ಬಳಿಕ ಶಫೀವುಲ್ಲಾನನ್ನು ಕೆರೆಗೆ ತಳ್ಳಿದ್ದಾರೆ. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಿದ್ದರು. ಆದರೆ, ಪೊಲೀಸರ ತನಿಖೆ ವೇಳೆ ಪತ್ನಿ ಶಹೀನಾಬಾನು ಹಾಗೂ ಆಕೆಯ ಪ್ರಿಯಕರ ಮುಬಾರಕ್ ಖಲಂದರಸಾಬ್‌ನ ನವರಂಗಿ ಆಟ ಬಯಲಿಗೆ ಬಂದಿದೆ. ಮೃತದೇಹ ಪತ್ತೆಯಾದ ಬಳಿಕ, ದೇಹದಲ್ಲಿ ಗಾಯಗಳಿರುವುದು ಕಂಡು ಅನುಮಾನ ಮೂಡಿತ್ತು. ಪೊಲೀಸರು ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದ ಈ ವೇಳೆ ಕೊಲೆ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಸದ್ಯ ಹಿರೇಕೆರೂರು ಪೊಲೀಸರು, ಆರೋಪಿಗಳಾದ ಪತ್ನಿ ಶಹೀನಾಬಾನು ಹಾಗೂ ಆಕೆಯ ಪ್ರಿಯಕರ ಮುಬಾರಕ್ ಖಲಂದರಸಾಬ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Recent Articles

spot_img

Related Stories

Share via
Copy link