ದೇಶದ ಜನರ ಜೀವನದಲ್ಲಿ ಬದಲಾವಣೆ ಮುಖ್ಯ ದೇಶದ ಹೆಸರಲ್ಲ : ಡಿಕೆಶಿ

ಬೆಂಗಳೂರು

       ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬುಧವಾರ ಮಾಧ್ಯಮಗಳ ಜೊತೆಗೆ ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದೇಶದ ಎಲ್ಲ ಜನರಿಗೂ ಅನ್ನ, ಉದ್ಯೋಗ, ಮನೆ ಸಿಕ್ಕರೆ ಅದನ್ನು ಬದಲಾವಣೆ ಎನ್ನಬಹುದು.

    ಕಳೆದ 9 ವರ್ಷಗಳಲ್ಲಿ ಜನರ ಆದಾಯ ದುಪಟ್ಟಾಯಿತೇ, 15 ಲಕ್ಷ ಹಣ ಬ್ಯಾಂಕ್ ಖಾತೆಗೆ ಬಂದಿದೆಯೇ? ಇಲ್ಲ. ಒಂದೇ ಒಂದು ಅಕ್ಕಿಕಾಳು ಕಡಿಮೆ ಕೊಟ್ಟರು ಬಿಡುವುದಿಲ್ಲ ಎಂದು ಬಿಜೆಪಿಯವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರು, ಆದರೆ ಅವರು ಕೊಟ್ಟ ಮಾತನ್ನು ಒಂದಾದರೂ ಉಳಿಸಿಕೊಂಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ. ಯುರೋಪ್ ಪ್ರವಾಸದಲ್ಲಿ ರಾಹುಲ್ ಗಾಂಧಿ: ಭಾರತೀಯ ವಲಸಿಗರೊಂದಿಗೆ ಸಭೆ ಶ್ರೀಮಂತರು, ದೊಡ್ಡ ಉದ್ಯಮಿಗಳು ದೇಶಬಿಟ್ಟು ಹೋಗುತ್ತಿದ್ದಾರೆ.

    12 ಲಕ್ಷ ಪಾಸ್ಪೋರ್ಟ್ಗಳನ್ನು ಸರ್ಕಾರದ ವಶಕ್ಕೆ ನೀಡಿ ಈ ದೇಶದ ಕೋಟ್ಯಾಧಿಪತಿಗಳು ಬೇರೆ ದೇಶದ ಪೌರತ್ವ ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಹಣ ಹೊರಗಡೆ ಹೋಗುತ್ತಿದೆ. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ. ನಮ್ಮ ಆಚಾರ- ವಿಚಾರ ಬದಲಾವಣೆಯಾಗಬೇಕು ಎಂದು ಹೇಳಿದರು. 

    ಸರ್ಕಾರ ಜನರ ಕಲ್ಯಾಣ ಮಾಡುವ ಹೊಸ ಕಾನೂನುಗಳನ್ನು ತರಬೇಕು. ನಮ್ಮ ಯುಪಿಎ ಸರ್ಕಾರ ಇದ್ದಾಗ ಮಾಹಿತಿಹಕ್ಕು, ಆರ್ಟಿಐ, ನರೇಗಾ, ಆಹಾರ ಭದ್ರತಾ ಕಾಯ್ದೆಗಳನ್ನು ಜಾರಿಗೆ ತಂದೆವು, ಇಂತಹ ಯೋಚನೆಗಳು ಬಿಜೆಪಿಯವರಿಗೆ ಬರುವುದಿಲ್ಲವೇ? ಎಂದು ಪ್ರಶ್ನಿಸಿದರು. ಗೃಹ ಸಚಿವರಾದ ಪರಮೇಶ್ವರ್ ಅವರು ಹಿಂದೂ ಧರ್ಮಕ್ಕೆ ಅಪ್ಪ- ಅಮ್ಮ ಯಾರು ಇಲ್ಲ ಎಂದು ಪ್ರಶ್ನಿಸಿರುವ ವಿಚಾರವಾಗಿ ಮಾತನಾಡಿ, ನಾನು ಭಾರತೀಯ ಹಾಗೂ ಹಿಂದೂವಾಗಿರುವುದ್ದಕ್ಕೆ ಹೆಮ್ಮೆ ಪಡುತ್ತೇನೆ ಎಂದು ತಿಳಿಸಿದರು.

    ಇನ್ನು ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡಿನ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕಾವೇರಿ ನೀರಿನ ವಿಚಾರವಾಗಿ ನಡೆಯುತ್ತಿರುವ ವಿಚಾರಣೆಯ ಜೂಮ್ ಲಿಂಕ್ ಅನ್ನು ನನಗೆ ಕಳುಹಿಸಿದ್ದರು. ನಾನು ವಿಚಾರಣೆಯನ್ನು ನೋಡಲು ಕಾಯುತ್ತಿದೆ. ಆದರೆ ವಿಚಾರಣೆಯನ್ನು ಸುಪ್ರೀಂಕೋರ್ಟಿನವರು ಮುಂದಕ್ಕೆ ಹಾಕಿದ್ದಾರೆ. ಕಳೆದೆರಡು ದಿನಗಳಲ್ಲಿ ಮಳೆ ಬರುತ್ತದೆ ಎಂದು ನಾವು ನಿರೀಕ್ಷಿಸಿದ್ದೆವು, ಮಳೆಯಾಗಿಲ್ಲ. ಹೀಗಾಗಿ ನಾವು ಮತ್ತೆ ಕಾಯಬೇಕು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap