ಬೆಂಗಳೂರು:
15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ 43 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಲಿದೆ. ಈ ಹಣಾಹಣಿಯು ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 3.30ರಿಂದ ಪ್ರಾರಂಭಗೊಳ್ಳಲಿದೆ. ಹಾರ್ದಿಕ್ ಪಾಂಡ್ಯ ಮುಂದಾಳತ್ವದ ತಂಡ ಗುಜರಾತ್ ಟೈಟಾನ್ಸ್ ಮೊದಲ ಬಾರಿಗೆ ಐಪಿಎಲ್ ಟೂರ್ನಿಗೆ ಪ್ರವೇಶ ಪಡೆದಿದ್ದು, ಅದ್ಭುತ ಪ್ರದರ್ಶನ ನೀಡುತ್ತಿದೆ.
ಇನ್ನೊಂದೆಡೆ ಆರ್‌ಸಿಬಿ ತಂಡವು ಕಳೆದ ಎರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋಲು ಕಂಡು ಹಿನ್ನಡೆ ಅನುಭವಿಸಿದೆ. ಹೀಗಾಗಿ ಬೆಂಗಳೂರು ತಂಡಕ್ಕೆ ಮುಂದೆ ನಡೆಯುವ ಎಲ್ಲಾ ಪಂದ್ಯಗಳು ಪ್ರಮುಖವಾದದ್ದಾಗಿದೆ.
ಗುಜರಾತ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ ಉತ್ತಮ ಫಾರ್ಮ್‌ನ್ನು ಕಂಡುಕೊಂಡಿದ್ದಾರೆ. ಈಗಾಗಲೇ ಐಪಿಎಲ್ ಟೂರ್ನಿಯಲ್ಲಿ ಆಡಿರುವ ಎಂಟು ಪಂದ್ಯಗಳ ಪೈಕಿ ಏಳರಲ್ಲಿ ಜಯ ಸಾಧಿಸಿದ್ದು, ಒಂದರಲ್ಲಿ ಸೋಲು ಕಂಡಿದ್ದಾರೆ. ಈ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದು ಎಲ್ಲಾ ತಂಡಗಳಿಂದಲೂ ಅಂತರ ಕಾಯ್ದುಕೊಂಡಿದ್ದಾರೆ.
ಆದರೆ ಕಳೆದ ಕೆಲ ಪಂದ್ಯಗಳಲ್ಲಿ ಹೀನಾಯವಾಗಿ ಸೋಲು ಕಾಣುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫಾರ್ಮ್‌ಗೆ ಮರಳಲು ಸಾಹಸಪಡುತ್ತಿದೆ. ಸದ್ಯ ಆರ್‌ಸಿಬಿ ಟೂರ್ನಿಯಲ್ಲಿ ಒಂಬತ್ತು ಪಂದ್ಯಗಳನ್ನಾಡಿದ್ದು, ಅದರಲ್ಲಿ ಐದರಲ್ಲಿ ಗೆಲುವು ಸಾಧಿಸಿದ್ದರೆ, ನಾಲ್ಕರಲ್ಲಿ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದೆ. ಇಂದಿನ ಪಂದ್ಯ ಸೇರಿದಂತೆ ಆರ್‌ಸಿಬಿ ಇನ್ನು ಐದು ಪಂದ್ಯಗಳನ್ನಾಡಬೇಕಿದೆ. ಇದರಲ್ಲಿ ನಾಲ್ಕು ಪಂದ್ಯಗಳನ್ನು ಗೆದ್ದರೆ ಮಾತ್ರ ಆರ್‌ಸಿಬಿ ಪ್ಲೇಆಫ್‌ಗೆ ಪ್ರವೇಶಿಸುವ ಅವಕಾಶ ಪಡೆಯಲಿದೆ.
ಇಂದು ಸೂರ್ಯಗ್ರಹಣ ಈ ರಾಶಿಗಳ ನಸೀಬು ಫಳ ಫಳ ಹೊಳೆಯುತ್ತದಂತೆ! ನಿಮ್ಮ ರಾಶಿ ಇದೆಯಾ?
ರಾಯಲ್ ಚಾಲೆಂಜರ್ಸ್ ಬೆಂಗಳೂರು:
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹರ್ಷಲ್ ಪಟೇಲ್, ವನಿಂದು ಹಸರಂಗ, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್
4ನೇ ಅಲೆಯ ಭೀತಿ: ಭಾರತದಲ್ಲಿ 24ಗಂಟೆಯಲ್ಲಿ 3,688 ಕೋವಿಡ್ ಪ್ರಕರಣ ಪತ್ತೆ, 50 ಮಂದಿ ಸಾವು
ಗುಜರಾತ್ ಟೈಟಾನ್ಸ್:
ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಯಶ್ ದಯಾಲ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
