ರಾಜ್ಯದಲ್ಲಿ ಕೋವಿಡ್​ ಹೆಚ್ಚಳ: ಸಕ್ರಿಯ ಪ್ರಕರಣಗಳಲ್ಲಿ ಕರ್ನಾಟಕಕ್ಕೆ ನಾಲ್ಕನೇ ಸ್ಥಾನ

ಬೆಂಗಳೂರು:

ಜೂನ್​ನಲ್ಲಿ ಕೋವಿಡ್​ ನಾಲ್ಕನೇ ಅಲೆ ಬರುವ ಸಾಧ್ಯತೆ ಕುರಿತು ತಜ್ಞರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್​ ಸೋಂಕು ಪ್ರಕರಣಗಳು ಹೆಚ್ಚುತ್ತಿದೆ. ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ (1,854ಕ್ಕೆ ಏರಿಕೆ) ಕರ್ನಾಟಕ ನಾಲ್ಕನೇ ಸ್ಥಾನಕ್ಕೇರಿರುವುದು ಆತಂಕಕ್ಕೆ ಕಾರಣವಾಗಿದೆ.

ದೆಹಲಿ ಕೋವಿಡ್​ ಸಕ್ರಿಯ ಪ್ರಕರಣಗಳಲ್ಲಿ (5,746 )ಮೊದಲ ಸ್ಥಾನದಲ್ಲಿದ್ದರೆ, ಕೇರಳ (2,888) 2 ಹಾಗೂ ಹರಿಯಾಣ (2,535) 3ನೇ ಸ್ಥಾನದಲ್ಲಿದೆ. ಕರ್ನಾಟಕದ ಬಳಿಕ ಉತ್ತರ ಪ್ರದೇಶ (1,742) 5ನೇ ಸ್ಥಾನ ಹಾಗೂ ಮಹಾರಾಷ್ಟ್ರ (1,109) 6ನೇ ಸ್ಥಾನದಲ್ಲಿದೆ. ಉಳಿದಂತೆ 18 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 500ಕ್ಕಿಂತ ಕಡಿಮೆ ಇದೆ. 8 ರಾಜ್ಯಗಳಲ್ಲಿ ಒಂದಂಕಿ ಇದೆ.

ಲಂಚ: ವಾಣಿಜ್ಯ ತೆರಿಗೆ ಇಲಾಖೆ ಎಸಿ ಬಂಧನ

 

ಕೇರಳದಲ್ಲೂ ಹೆಚ್ಚಳ: ಕರ್ನಾಟಕದಲ್ಲಿ ಕಳೆದ ಎರಡು ತಿಂಗಳಲ್ಲಿ 6 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣ ವರದಿಯಾಗಿದ್ದು, 65 ಮಂದಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ನೆರೆಯ ಕೇರಳದಲ್ಲಿ ಸೋಂಕಿನ ಪ್ರಮಾಣದ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚಿದ್ದು, ಮೇ 3ರಂದು ಒಂದೇ ದಿನ 52 ಸಾವು ಹಾಗೂ ಮೇ 5ರಂದು 26 ಸಾವು ಸಂಭವಿಸಿದೆ.

ನಿಯಮ ಪಾಲಿಸಿ: ರಾಜ್ಯ ದಲ್ಲಿ ಕೋವಿಡ್​ ಸೋಂಕು ತಗ್ಗಿದೆಯಾದರೂ ಸಂಪೂರ್ಣ ಹೋಗಿಲ್ಲ. ಹಾಗಾಗಿ ಜನರು ರ್ನಿಲಕ್ಷ್ಯ ಮಾಡದೆ ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿ ಇನ್ನೂ ಕೆಲ ಕಾಲ ಕೋವಿಡ್​ ನಿಯಮ ಪಾಲಿಸುವ ಅಗತ್ಯವಿದೆ. ಜತೆಗೆ ಜನರೇ ಸ್ವಯಂ ಪ್ರೇರಿತರಾಗಿ ಮುನ್ನೆಚ್ಚರಿಕೆ ಡೋಸ್​ ಲಸಿಕೆ ಪಡೆಯುವುದು ಸೂಕ್ತ ಎಂದು ಕೋವಿಡ್​ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷಡಾ. ಎಂ.ಕೆ. ಸುದರ್ಶನ್​ ತಿಳಿಸಿದ್ದಾರೆ.

ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗುವ ಸಾಧ್ಯತೆ: ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್

181 ಮಂದಿಗೆ ಸೋಂಕು: ರಾಜ್ಯದಲ್ಲಿ ಶುಕ್ರವಾರ 15,759 ಕೋವಿಡ್​ ಪರೀೆ ನಡೆಸಲಾಗಿದ್ದು, 181 ಮಂದಿಗೆ ಸೋಂಕು ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,895ಕ್ಕೆ ಏರಿಕೆಯಾಗಿದೆ. ವಿಜಯಪುರದಲ್ಲಿ ಸೋಂಕಿನಿಂದ 50 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಮೃತರ ಒಟ್ಟು ಸಂಖ್ಯೆ 40,061 ತಲುಪಿದೆ. ಕಳೆದ 24 ಗಂಟೆಗಳಲ್ಲಿ 139 ಸೋಂಕಿತರು ಚೇತರಿಸಿಕೊಂಡಿದ್ದು, ಗುಣಮುಖರ ಒಟ್ಟು ಸಂಖ್ಯೆ 39.06 ಲಕ್ಷ ಮೀರಿದೆ. ಈವರೆಗೂ 39.48 ಲಕ್ಷಕ್ಕೂ ಅಧಿಕ ಮಂದಿ ಸೋಂಕಿನಿಂದ ಬಳಲಿದ್ದಾರೆ. ಬೆಂಗಳೂರು ನಗರದಲ್ಲಿ 149 ಮಂದಿ, ಮೈಸೂರಿನಲ್ಲಿ 27, ದಣ ಕನ್ನಡದಲ್ಲಿ ಮೂವರು ಹಾಗೂ ಹಾಸನ ಮತ್ತು ಕಲಬುರಗಿಯಲ್ಲಿ ತಲಾ ಒಬ್ಬರು ಸೇರಿ 181 ಮಂದಿಗೆ ಸೋಂಕು ದೃಢಪಟ್ಟಿದೆ.

 ಹುಬ್ಬಳ್ಳಿ ಸರ್ಕಿಟ್ ಹೌಸ್ ನಲ್ಲಿ  ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ..!

     ಗಡಿ ಭಾಗಗಳಲ್ಲಿ ಕ್ರಮ ಅಗತ್ಯ ರಾಜ್ಯದಲ್ಲಿ ಕೋವಿಡ್​ ಸೋಂಕು ತೀವ್ರವಾಗಿಲ್ಲವಾದರೂ, ದಿನೇ ದಿನೆ ಪ್ರಕರಣ ಹೆಚ್ಚುತ್ತಿದೆ. ಕೇರಳದಲ್ಲಿ ಸೋಂಕು , ಸಾವಿನ ಪ್ರಮಾಣ ಹೆಚ್ಚಾಗಿರುವುದರಿಂದ ಗಡಿ ಭಾಗಗಳಲ್ಲಿ ಎಚ್ಚರಿಕೆ ಕ್ರಮ ವಹಿಸುವ ಅಗತ್ಯವಿದೆ. ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಬರುವ ಪ್ರಯಾಣಿಕರ ತಪಾಸಣೆ ಬಗ್ಗೆಯೂ ಕ್ರಮ ವಹಿಸುವ ಅಗತ್ಯವಿದೆ ಎನ್ನುತ್ತಾರೆ ತಜ್ಞರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap