ದಾವಣಗೆರೆ:
ಮಳೆಯ ಅವಾಂತರ ಜಿಲ್ಲೆಯಲ್ಲಿ ಸತತವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಪ್ರದೇಶಗಳ ಕೆರೆಗಳ, ಹಳ್ಳಗಳ ಸೇತುವೆಗಳು ನೀರಿನಿಂದ ಜಲಾವೃತಗೊಂಡಿವೆ. ಆದರೂ ಅನಿವಾರ್ಯವಾಗಿ ತುಂಬಿದ ನೀರನಿಲ್ಲೇ ಸಾರ್ವಜನಿಕರು ಓಡಾಡುತ್ತಿದ್ದು, ಆಪಾಯವನ್ನು ಕೈ ಬೀಸಿ ಕರೆಯುತ್ತಿದೆ. ವಾಹನಗಳು ಇದೇ ಮಾರ್ಗದಲ್ಲಿ ಓಡಾಡುತ್ತಿದ್ದು, ಪ್ರಯಾಣಿಕರು, ಶಾಲಾ ಮಕ್ಕಳು ಜೀವಯನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ.ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕೆಂಗಾಪುರ ಗ್ರಾಮದ ಬಳಿ ಇರುವ ಸೂಳೆಕೆರೆ ಹಳ್ಳದ ಸೇತುವೆ ನಿರಂತರ ಮಳೆಯಿಂದಾಗಿ ನೀರಿನಿಂದ ಮುಚ್ಚಿಹೋಗಿದೆ. ಆದರೂ ಅದೇ ಮಾರ್ಗದಲ್ಲಿ ಶಾಲಾ ಬಸ್ಸುಗಳು ಸಂಚರಿಸುತ್ತಿವೆ. ಕೇವಲ ವಿದ್ಯಾರ್ಥಿಗಳೂ ಮಾತ್ರವಲ್ಲದೇ ಪ್ರತಿನಿತ್ಯ ನೂರಾರು ಜನರು ಇದೇ ಮಾರ್ಗದಲ್ಲಿ ಸಂಚರಿಸುತ್ತಾರೆ.
ಪ್ರತಿಬಾರಿಯ ಮಳೆಗಾಲದಲ್ಲಿ ಮಳೆ ಬಂದಾಗ ಸೇತುವೆಯಲ್ಲಿ ನೀರು ನಿಂತು ಸಂಪರ್ಕ ಕಡಿತಗೊಳ್ಳುತ್ತದೆ. ಈ ಕುರಿತಂತೆ ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಜನಪ್ರತಿನಿಧಿಗಳು, ಅಧಿಕಾರಿಗಳು ಅಮೂಲ್ಯ ಜೀವನಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಸೇತುವೆಗಿಂತ ಮರ?ನಾಲ್ಕು ಅಡಿಗಳ ಮೇಲೆ ನೀರು ನಿಂತಿದೆ. ಕಾರಣ ಎತ್ತರವಾದ ಸೇತುವೆ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
