ಸೆಮಿಫೈನಲ್‌ ಮ್ಯಾಚ್‌ : ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಭಾರತ

ಮುಂಬೈ: 

       ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

     ಈ  ವಿಶ್ವಕಪ್ ಆವೃತ್ತಿಯಲ್ಲಿ ಆಡಿರುವ ಎಲ್ಲಾ ಒಂಬತ್ತು ಪಂದ್ಯಗಳನ್ನು ಗೆದ್ದಿರುವ ಭಾರತವು ಅತ್ಯದ್ಭುತ ಫಾರ್ಮ್‌ನಲ್ಲಿದೆ. ಎಲ್ಲೆಡೆಯಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಪ್ರತಿಯೊಂದು ಪಂದ್ಯದಲ್ಲೂ ಒಬ್ಬೊಬ್ಬ ಆಟಗಾರರು ತಮ್ಮ ಟ್ಯಾಲೆಂಟ್ ಪ್ರದರ್ಶಿಸುತ್ತಿದ್ದಾರೆ. 

   ಪಂದ್ಯಾವಳಿಯ ಮೊದಲಾರ್ಧದಲ್ಲಿ ನ್ಯೂಜಿಲೆಂಡ್ ಸತತವಾಗಿ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿತು. ಆದರೆ, ಐದನೇ ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ ನಾಲ್ಕು ವಿಕೆಟ್‌ಗಳ ಸೋಲನುಭವಿಸಿತು. ನ್ಯೂಜಿಲೆಂಡ್ ಆಡಿರುವ 9 ಪಂದ್ಯಗಳಲ್ಲಿ 4 ಪಂದ್ಯಗಳಲ್ಲಿ ಸೋಲು ಕಂಡಿದೆ. ಆದಾಗ್ಯೂ, ಲೀಗ್ ಹಂತದ ತಮ್ಮ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧದ ಅದ್ಭುತ ಜಯವು ಕಿವೀಸ್ ತಂಡಕ್ಕೆ ಸೆಮಿ-ಫೈನಲ್‌ ಪ್ರವೇಶಕ್ಕೆ ಸಹಾಯ ಮಾಡಿತು. 10 ಅಂಕಗಳ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. 

   ವಾಂಖೆಡೆ ಸ್ಟೇಡಿಯಂನಲ್ಲಿ ಸಾಮಾನ್ಯವಾಗಿ ಬಹಳಷ್ಟು ರನ್‌ಗಳನ್ನು ನಿರೀಕ್ಷಿಸಬಹುದು. ಟೂರ್ನಿಯಲ್ಲಿ ಇದುವರೆಗೆ ಮುಂಬೈನಲ್ಲಿ ನಾಲ್ಕು ಪಂದ್ಯಗಳನ್ನು ಆಡಲಾಗಿದೆ. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ನಂತರ ಮೂರು ತಂಡಗಳು ಗೆದ್ದಿವೆ. ಚೇಸಿಂಗ್ ವೇಳೆ ಒಂದು ತಂಡ ಮಾತ್ರ ಜಯ ಸಾಧಿಸಿದೆ. ಈ ಪಂದ್ಯಾವಳಿಯಲ್ಲಿ ಈ ಸ್ಥಳದಲ್ಲಿ ಸರಾಸರಿ ಮೊದಲ ಇನಿಂಗ್ಸ್ ಸ್ಕೋರ್ 357 ಆಗಿದೆ. ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಲು ಒಲವು ತೋರುತ್ತಾನೆ. ಏಕೆಂದರೆ, ಇಲ್ಲಿ ಬೃಹತ್ ಮೊತ್ತವನ್ನು ಬೆನ್ನಟ್ಟುವುದು ವಿಶೇಷವಾಗಿ ನಾಕೌಟ್ ಪಂದ್ಯದಲ್ಲಿ ಕಷ್ಟಕರವಾಗಿರುತ್ತದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap